alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ಧಿ ವಿನಾಯಕ ದೇವಾಲಯಕ್ಕೆ ಭೇಟಿ ನೀಡಿದ ದೀಪಿಕಾ

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಶಾಹಿದ್ ಕಪೂರ್ ಅಭಿನಯದ ‘ಪದ್ಮಾವತ್’ ಚಿತ್ರ ಇದೇ ತಿಂಗಳ 25 ರಂದು ಬಿಡುಗಡೆಯಾಗಲಿದೆ.

ಚಿತ್ರಕ್ಕೆ ಆರಂಭದಿಂದಲೂ ಕರಣಿ ಸೇನೆ ವಿರೋಧ ವ್ಯಕ್ತಪಡಿಸುತ್ತಿದ್ದು, ಚಿತ್ರೀಕರಣ ಸಂದರ್ಭದಲ್ಲೇ ಸಂಜಯ್ ಲೀಲಾ ಬನ್ಸಾಲಿ ಮೇಲೆ ಹಲ್ಲೆ ನಡೆಸಲಾಗಿತ್ತು. ಜೊತೆಗೆ ದೀಪಿಕಾಗೂ ಕೆಲವರು ಜೀವ ಬೆದರಿಕೆಯೊಡ್ಡಿದ್ದರು.

ವಿರೋಧದ ನಡುವೆಯೂ ‘ಪದ್ಮಾವತ್’ ಚಿತ್ರ ಬಿಡುಗಡೆಯಾಗುತ್ತಿದ್ದು, ಚಿತ್ರಕ್ಕೆ ನಿಷೇಧ ಕೋರಿ ರಾಜಸ್ಥಾನ ಹಾಗೂ ಮಧ್ಯಪ್ರದೇಶ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿರುವುದರಿಂದ ದೇಶಾದ್ಯಂತ ಚಿತ್ರ ಬಿಡುಗಡೆಯಾಗುತ್ತಿದೆ.

ಈ ಮಧ್ಯೆ ನಟಿ ದೀಪಿಕಾ ಪಡುಕೋಣೆ ಇಂದು ಮುಂಬೈನ ಪ್ರಸಿದ್ಧ ಸಿದ್ಧಿ ವಿನಾಯಕ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಬಿಗಿ ಭದ್ರತೆಯೊಂದಿಗೆ ದೇವಾಲಯಕ್ಕೆ ಆಗಮಿಸಿದ್ದ ದೀಪಿಕಾ ಪಡುಕೋಣೆ, ‘ಪದ್ಮಾವತ್’ ಚಿತ್ರದ ಕುರಿತು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...