alex Certify
ಕನ್ನಡ ದುನಿಯಾ       Mobile App
       

Kannada Duniya

ತಿರುಪತಿ ತಿಮ್ಮಪ್ಪನ ಮೊರೆ ಹೋದ ‘ಪದ್ಮಾವತಿ’

ಸಂಜಯ್ ಲೀಲಾ ಬನ್ಸಾಲಿ ಅವರ ‘ಪದ್ಮಾವತಿ’ ಚಿತ್ರ ವಿವಾದಕ್ಕೆ ಕಾರಣವಾಗಿದ್ದು, ಚಿತ್ರ ಬಿಡುಗಡೆಗೆ ಅನೇಕ ಕಡೆಗಳಲ್ಲಿ ವಿರೋಧ ವ್ಯಕ್ತವಾಗಿದೆ.

ಇದೇ ಸಂದರ್ಭದಲ್ಲಿ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ತಿರುಪತಿ ತಿರುಮಲ ದೇವಾಲಯಕ್ಕೆ ಭೇಟಿ ನೀಡಿರುವುದು ವಿಶೇಷವಾಗಿದೆ. ಚಲನಚಿತ್ರೋದ್ಯಮದಲ್ಲಿ ಇತ್ತೀಚೆಗೆ 1 ದಶಕವನ್ನು ಪೂರ್ಣಗೊಳಿಸಿರುವ ದೀಪಿಕಾ ‘ಪದ್ಮಾವತಿ’ ಕುರಿತಾಗಿ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ನಿರ್ದೇಶಕರಾದ ಫರ್ಹಾ ಖಾನ್ ಮೊದಲಾದವರೊಂದಿಗೆ ತಿರುಮಲ ವೆಂಕಟೇಶ್ವರ ದೇವಾಲಯಕ್ಕೆ ದೀಪಿಕಾ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ತಿರುಮಲ ಭೇಟಿಯ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

‘ಪದ್ಮಾವತಿ’ ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದ್ದು, ರಜಪೂತ ಸಮುದಾಯಕ್ಕೆ ನೋವು ತರುವ ಕತೆ ಒಳಗೊಂಡಿದೆ. ಅದಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸಲಾಗುತ್ತಿದೆ. ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಶಾಹಿದ್ ಕಪೂರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಪದ್ಮಾವತಿ’ ಡಿಸೆಂಬರ್ 1 ರಂದು ಬಿಡುಗಡೆಯಾಗಲಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...