alex Certify
ಕನ್ನಡ ದುನಿಯಾ       Mobile App
       

Kannada Duniya

‘ಪೊಗರು’ ಚಿತ್ರಕ್ಕಾಗಿ ಮತ್ತೆ ದೇಹ ದಂಡಿಸಿದ ಧ್ರುವ ಸರ್ಜಾ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಪೊಗರು’ ಭಾರೀ ನಿರೀಕ್ಷೆ ಮೂಡಿಸಿದೆ. ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದ್ದು, 2 ನೇ ಹಂತದ ಚಿತ್ರೀಕರಣಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿದೆ.

ವಿಭಿನ್ನ ಕಥಾಹಂದರವಿರುವ ‘ಪೊಗರು’ ಚಿತ್ರದಲ್ಲಿ ಧ್ರುವ ಸರ್ಜಾ 8 ನೇ ತರಗತಿ ವಿದ್ಯಾರ್ಥಿ ಪಾತ್ರಕ್ಕಾಗಿ ಬರೋಬ್ಬರಿ 30 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರೆ. ಈ ಭಾಗದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದ್ದು, ಮೇ 20 ರಿಂದ 2 ನೇ ಹಂತದ ಚಿತ್ರೀಕರಣ ಆರಂಭವಾಗಲಿದೆ. ಇದಕ್ಕಾಗಿ ಧ್ರುವಸರ್ಜಾ ಮತ್ತೆ ಹಳೆ ಗೆಟಪ್ ಗೆ ಬರುತ್ತಿದ್ದು, ತೂಕವನ್ನು ಹೆಚ್ಚಿಸಿಕೊಳ್ತಿದ್ದಾರೆ.

ಗಂಗಾಧರ್ ನಿರ್ಮಾಣದಲ್ಲಿ ನಂದಕಿಶೋರ್ ನಿರ್ದೇಶನದಲ್ಲಿ ಚಿತ್ರ ಮೂಡಿ ಬರಲಿದ್ದು, ಶಾನ್ವಿ ಶ್ರೀವಾತ್ಸವ್, ರಶ್ಮಿಕಾ ಮಂದಣ್ಣ ಮೊದಲಾದವರು ಅಭಿನಯಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...