alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಸುದ್ದಿಯಲ್ಲಿದ್ದಾರೆ ‘ಐಶ್’, ಕಾರಣ ಗೊತ್ತಾ..?

aishcryabhisket-647x450

ಐಶ್ವರ್ಯಾ ರೈ ಅಂದರೇನೆ ಸೌಂದರ್ಯದ ಜೊತೆಗೆ ಅದ್ಬುತ ಅಭಿನಯ ನೆನಪಾಗುತ್ತದೆ. ಅಭಿಷೇಕ್ ಬಚ್ಚನ್ ಅವರನ್ನು ಮದುವೆಯಾಗುವ ಮೂಲಕ ಬಚ್ಚನ್ ಕುಟುಂಬದ ಸೊಸೆಯಾದ ಐಶ್ವರ್ಯಾ ರೈ ಪುತ್ರಿ ಆರಾಧ್ಯ ಜನಿಸಿದ ನಂತರ ಸಿನಿಮಾ ರಂಗದಿಂದ ದೂರವೇ ಉಳಿದಿದ್ದರು.

ಕಳೆದ ವರ್ಷ ಸಿನಿಮಾದಲ್ಲಿ ನಟಿಸುವ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸಿದ ಐಶ್ವರ್ಯಾ ರೈ ಬಚ್ಚನ್ ‘ಜಜ್ಬಾ’ದಲ್ಲಿ ಮನೋಜ್ಞ ಅಭಿನಯ ನೀಡಿದ್ದರು. ಈ ಸಿನಿಮಾದಲ್ಲಿನ ಅವರ ಪಾತ್ರಕ್ಕೆ ವ್ಯಾಪಕ ಪ್ರಶಂಸೆ ಕೂಡ ವ್ಯಕ್ತವಾಗಿತ್ತು. ಐಶ್ವರ್ಯಾ ಇದೀಗ ‘ಮೇರಿಕೋಮ್’ ಖ್ಯಾತಿಯ ನಿರ್ದೇಶಕರಾದ ಓಮಂಗ್ ಕುಮಾರ್ ನಿರ್ದೇಶನದಲ್ಲಿ ‘ಸರಬ್ಜಿತ್’ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ನಡೆಯುತ್ತಿದ್ದು, ಮೇ ತಿಂಗಳಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.

‘ಸರಬ್ಜಿತ್’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ಐಶ್ವರ್ಯಾ ರೈ ಬಚ್ಚನ್, ಸಿನಿಮಾದಲ್ಲಿನ ಒಂದು ದೃಶ್ಯದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಐಶ್ವರ್ಯಾ ಅವರು ಈ ದೃಶ್ಯದಲ್ಲಿ ಮನೋಜ್ಞವಾಗಿ ಅಭಿನಯಿಸಿದ್ದನ್ನು ಕಂಡ ನಿರ್ದೇಶಕ ಓಮಂಗ್ ಕುಮಾರ್ ಸೇರಿದಂತೆ ಇಡೀ ಚಿತ್ರತಂಡವೇ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಪ್ರಶಂಸೆ ವ್ಯಕ್ತಪಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...