alex Certify
ಕನ್ನಡ ದುನಿಯಾ       Mobile App
       

Kannada Duniya

‘ರಾಜಕುಮಾರ’ ನಿರ್ದೇಶಕನ ನಿಶ್ಚಿತಾರ್ಥ

ನಿರ್ದೇಶಕ ಸಂತೋಷ್ ಆನಂದರಾಮ್ ಹಾಗೂ ಸುರಭಿ ಅವರ ನಿಶ್ಚಿತಾರ್ಥ ಬಳ್ಳಾರಿಯಲ್ಲಿ ನೆರವೇರಿದೆ. ನಿಶ್ಚಿತಾರ್ಥ ಸಮಾರಂಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ರಾಕಿಂಗ್ ಸ್ಟಾರ್ ಯಶ್ ದಂಪತಿ ಭಾಗವಹಿಸಿ ಶುಭ ಹಾರೈಸಿದ್ದಾರೆ.

‘ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ’, ‘ರಾಜಕುಮಾರ’ ಸ್ಯಾಂಡಲ್ ವುಡ್ ನಲ್ಲಿ ಭರ್ಜರಿ ಯಶಸ್ಸು ಕಂಡ ಚಿತ್ರಗಳಾಗಿದ್ದು, ಸಂತೋಷ್ ಆನಂದರಾಮನ್ ಈ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.

ಬಳ್ಳಾರಿಯ ಉದ್ಯಮಿ ಶ್ರೀನಿವಾಸರಾವ್ ಅವರ ಪುತ್ರಿ ಸುರಭಿ ಅವರೊಂದಿಗೆ ಸಂತೋಷ್ ಆನಂದರಾಮ್ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದು, ಭಾನುವಾರ ಬಳ್ಳಾರಿಯಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ನಡೆದಿದೆ.

ನಿಶ್ಚಿತಾರ್ಥ ಸಮಾರಂಭದಲ್ಲಿ ಪುನೀತ್ ರಾಜ್ ಕುಮಾರ್ ಮತ್ತು ಯಶ್ –ರಾಧಿಕಾ ಪಂಡಿತ್ ಆಗಮಿಸಿದ ಸುದ್ದಿ ತಿಳಿದ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...