alex Certify
ಕನ್ನಡ ದುನಿಯಾ       Mobile App
       

Kannada Duniya

ಗಾಯಕರಾಗಿ ವರನಟ ಡಾ. ರಾಜ್ ಕುಮಾರ್

ಕೇವಲ ನಟನೆ ಮಾತ್ರವಲ್ಲದೇ ಅತ್ಯುತ್ತಮ ಗಾಯಕರೂ ಆಗಿದ್ದ ವರನಟ ಡಾ.ರಾಜ್ ಕುಮಾರ್ ಸಂಗೀತ ಲೋಕದಲ್ಲಿ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ.

1974 ರಲ್ಲಿ ಬಿಡುಗಡೆಯಾದ ‘ಸಂಪತ್ತಿಗೆ ಸವಾಲ್’ ಚಿತ್ರದ ‘ಯಾರೇ ಕೂಗಾಡಲಿ’ ಎಂಬ ಹಾಡಿನಿಂದ ಅವರು ಸಂಪೂರ್ಣ ಪ್ರಮಾಣದ ಗಾಯಕರಾದರು. ಇದಕ್ಕೂ ಮುಂಚೆ 1956 ರಲ್ಲೇ ಓಹಿಲೇಶ್ವರ ಚಿತ್ರದಲ್ಲಿ “ಶರಣು ಶಂಭೋ” ಗೀತೆಯನ್ನು ಹಾಗೂ ಮಹಿಷಾಸುರ ಮರ್ದಿನಿ ಚಿತ್ರದಲ್ಲಿ ಎಸ್. ಜಾನಕಿಯವರೊಂದಿಗೆ “ತುಂಬಿತು ಮನವ ತಂದಿತು ಸುಖವ” ಎಂಬ ಯುಗಳ ಗೀತೆಯನ್ನು ಹಾಡಿದ್ದರು.

1962 ರಲ್ಲಿ ದೇವಸುಂದರಿ ಚಿತ್ರದಲ್ಲಿ ಹಾಸ್ಯರತ್ನ ನರಸಿಂಹರಾಜು ಅವರ ಪಾತ್ರಕ್ಕೆ ಯುಗಳ ಗೀತೆಯೊಂದನ್ನೂ ಹಾಡಿದ್ದಾರೆ. ಡಾ.ರಾಜ್ ಅವರು ಬೇರೊಬ್ಬರ ಅಭಿನಯಕ್ಕೆ ಹಿನ್ನೆಲೆ ಗಾಯನ ಮಾಡಿದ ಮೊದಲ ಚಿತ್ರಗೀತೆಯಿದು. ‘ಜೀವನಚೈತ್ರ’ ಚಿತ್ರದ ‘ನಾದಮಯ….’ ಹಾಡಿಗೆ ಅಣ್ಣಾವ್ರಿಗೆ ರಾಷ್ಟ್ರ ಪ್ರಶಸ್ತಿ ಒಲಿದಿದೆ.

ಚಿತ್ರಗೀತೆಗಳಷ್ಟೇ ಅಲ್ಲದೆ ಹಲವಾರು ಭಕ್ತಿಗೀತೆಗಳನ್ನು ಹಾಡಿದ್ದಾರೆ. ಕನ್ನಡವೇ ಸತ್ಯ, ಅನುರಾಗ, ಮಂಕುತಿಮ್ಮನ ಕಗ್ಗ – ರಾಜ್ ಕಂಠದಲ್ಲಿ ಮೂಡಿ ಬಂದ ಭಾವಗೀತೆ ಸಂಕಲನಗಳು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...