alex Certify
ಕನ್ನಡ ದುನಿಯಾ       Mobile App
       

Kannada Duniya

ಅಣ್ಣಾವ್ರ ಅದ್ಭುತ ನಟನೆಯ ಹಿಂದಿದೆ ತಂದೆಯ ನೆರಳು

ಡಾ.ರಾಜ್ ಕುಮಾರ್ ಒಬ್ಬ ಮೇರುನಟ. ಯಾವುದೇ ಪಾತ್ರ ಕೊಟ್ಟರೂ ಲೀಲಾಜಾಲವಾಗಿ ಅಭಿನಯಿಸಬಲ್ಲವರಾಗಿದ್ದವರು. ಅಂದ ಹಾಗೆ ಅಣ್ಣಾವ್ರು ಇಷ್ಟು ದೊಡ್ಡ ನಟರಾಗಲು ಅವರ ತಂದೆಯ ಪ್ರಭಾವ ದೊಡ್ಡದು.

ಮುತ್ತುರಾಜರ ತಂದೆ ಸಿಂಗಾನಲ್ಲೂರು ಪುಟ್ಟಸ್ವಾಮಯ್ಯನವರು ಎಂದರೆ 1930-50 ರ ಕಾಲದಲ್ಲಿ ಕನ್ನಡ ರಂಗಭೂಮಿಯ ದೊಡ್ಡ ಹೆಸರು. ರೌದ್ರ ಪಾತ್ರಗಳಿಗೆ ಹೆಸರಾಗಿದ್ದ ಪುಟ್ಟಸ್ವಾಮಯ್ಯನವರು ಗುಬ್ಬಿ ಕಂಪನಿಯಲ್ಲಿ ಕಲಾವಿದರಾಗಿದ್ದರು.

ಬಡತನದಿಂದಾಗಿ ಪುಟ್ಟಸ್ವಾಮಯ್ಯನವರ ಪುತ್ರ ಮುತ್ತುರಾಜ್ ರ ವಿದ್ಯಾಭ್ಯಾಸ ನಾಲ್ಕನೇ ತರಗತಿಗೆ ನಿಂತಿತು. ಗುಬ್ಬಿ ಕಂಪನಿಯೇ ಅವರಿಗೆ ವಿಶ್ವವಿದ್ಯಾನಿಲಯವಾಯಿತು. ತಂದೆಯನ್ನು ನೆರಳಿನಂತೆ ಹಿಂಬಾಲಿಸಿದ ಮುತ್ತುರಾಜ್‌ ಗೆ ಅವರಿಂದಲೇ ತರಬೇತಿಯಾಯಿತು. ಆರಂಭದಲ್ಲಿ ನಾಟಕಗಳಲ್ಲಿ ಸಣ್ಣ ಪುಟ್ಟ ಪಾತ್ರ ನಿರ್ವಹಿಸುತ್ತಿದ್ದರು.

ಹೀಗಾಗಿ ರಾಜ್‌ ಕುಮಾರ್ ಜೀವನದಲ್ಲಿ ತಂದೆ ಬೀರಿರುವ ಪ್ರಭಾವ ಅಪಾರ. “ನನ್ನ ತಂದೆ ರಂಗದ ಮೇಲೆ ಹುರಿ ಮೀಸೆ ತಿರುಗಿಸುತ್ತಾ, ಆರ್ಭಟಿಸುತ್ತಾ ರಂಗ ಪ್ರವೇಶಿಸಿದರೆಂದರೆ ಎಂಥವರಿಗೂ ಒಂದು ಬಾರಿ ನಡುಕ ಬರುತ್ತಿತ್ತು” ಎಂದು ತಂದೆಯವರ ಅಭಿನಯವನ್ನು ಬಣ್ಣಿಸುವ ರಾಜ್‌ ಕುಮಾರ್ ಅವರಿಗೆ ತಂದೆಯ ಅಭಿನಯ ಬಲುಪ್ರಿಯವಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...