alex Certify
ಕನ್ನಡ ದುನಿಯಾ       Mobile App
       

Kannada Duniya

ಅಭಿಮಾನಿಗಳೊಂದಿಗೆ ‘ದುನಿಯಾ’ ವಿಜಯ್ ಬರ್ತಡೇ

ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ‘ದುನಿಯಾ’ ವಿಜಯ್ ಇಂದು ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ನಿನ್ನೆ ರಾತ್ರಿಯಿಂದಲೇ ಹೊಸಕೆರೆಹಳ್ಳಿಯಲ್ಲಿರುವ ವಿಜಯ್ ನಿವಾಸದ ಬಳಿ ಅಭಿಮಾನಿಗಳ ದಂಡೇ ನೆರೆದಿತ್ತು.

ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಅಭಿಮಾನಿಗಳು ನೆಚ್ಚಿನ ನಟನಿಗೆ ಶುಭಾಶಯ ಕೋರಿದ್ದು, ತಾವು ತಂದಿದ್ದ ಕೇಕ್ ಕಟ್ ಮಾಡಿಸಿದ್ದಾರೆ. ಘೋಷಣೆ ಕೂಗಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಅಭಿಮಾನಿಗಳೊಂದಿಗೆ ಹಾಗೂ ಕುಟುಂಬದವರೊಂದಿಗೆ ಕೇಕ್ ಕತ್ತರಿಸಿದ ವಿಜಿ ಎಲ್ಲರಿಗೂ ಧನ್ಯವಾದ ಹೇಳಿ, ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ಖುಷಿಯಾಗಿದೆ ಎಂದು ಹೇಳಿದ್ದಾರೆ.

ವಿಜಯ್ ಅಭಿನಯದ ‘ಕನಕ’ ಚಿತ್ರ ಮುಂದಿನ ವಾರ ರಿಲೀಸ್ ಆಗಲಿದೆ. ಅವರ ಹೊಸ ಚಿತ್ರ ‘ಕುಸ್ತಿ’ ಸೆಟ್ಟೇರಲಿದೆ. ಇದರೊಂದಿಗೆ ಅವರ ಅಭಿಮಾನಿಗಳ ಸಂಭ್ರಮ ಹೆಚ್ಚಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...