alex Certify
ಕನ್ನಡ ದುನಿಯಾ       Mobile App
       

Kannada Duniya

ದುನಿಯಾ ವಿಜಿಯ ದಾದಾಗಿರಿಗೆ ಬೆಚ್ಚಿ ಬಿದ್ದಿದೆ ಕನ್ನಡ ಚಿತ್ರರಂಗ

ಜಿಮ್ ಟ್ರೈನರ್ ಮಾರುತಿ ಗೌಡ ಎಂಬವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

8ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, ನ್ಯಾಯಾಂಗ ಬಂಧನಕ್ಕೆ ಆದೇಶಿಸುತ್ತಿದ್ದಂತೆಯೇ ಪೊಲೀಸರು ಅವರನ್ನು ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕರೆದೊಯ್ದಿದ್ದಾರೆ.

ದುನಿಯಾ ವಿಜಯ್ ಅವರ ಈ ದಾಂಧಲೆ ಪ್ರಕರಣ ಮಾಧ್ಯಮಗಳಲ್ಲಿ ಬಹಿರಂಗವಾಗುತ್ತಿದ್ದಂತೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನಟನಾಗಿ ಎಲ್ಲರಿಗೂ ಮಾದರಿಯಾಗಿರಬೇಕಾಗಿದ್ದ ದುನಿಯಾ ವಿಜಯ್ ಇಂತಹ ವರ್ತನೆ ತೋರಿರುವುದು ಖಂಡನೀಯವೆಂದು ಬಹುತೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆ ಚಿತ್ರರಂಗದ ಮಂದಿಯೂ ದುನಿಯಾ ವಿಜಯ್ ಮಾಡಿರುವುದು ಸರಿಯಲ್ಲವೆಂದು ಖಾಸಗಿಯಾಗಿ ಹೇಳುತ್ತಿರುವರಾದರೂ ನಟ ಜಗ್ಗೇಶ್ ಅವರನ್ನು ಹೊರತುಪಡಿಸಿ ಮಿಕ್ಕವರು ಬಹಿರಂಗವಾಗಿ ಮಾತನಾಡುತ್ತಿಲ್ಲ.

ಚಲನಚಿತ್ರ ವಾಣಿಜ್ಯ ಮಂಡಳಿ ನಾಳೆ ಈ ಕುರಿತು ಸಭೆ ನಡೆಸಲಿದೆ ಎಂದು ಹೇಳಲಾಗಿದ್ದು, ದುನಿಯಾ ವಿಜಯ್ ಅವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಚಿತ್ರರಂಗದಲ್ಲಿ ಬಹು ಕಷ್ಟದಿಂದ ಎತ್ತರಕ್ಕೆ ಬೆಳೆದಿದ್ದ ದುನಿಯಾ ವಿಜಯ್ ಇಂದು ತಮ್ಮ ಸ್ವಯಂಕೃತ ಅಪರಾಧದಿಂದಾಗಿ ಈ ಹಂತಕ್ಕೆ ತಲುಪಬೇಕಾಗಿ ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...