alex Certify
ಕನ್ನಡ ದುನಿಯಾ       Mobile App
       

Kannada Duniya

ಬಯಸದೇ ಬಂದ ಭಾಗ್ಯ ಎಂದ್ರು ಜಗ್ಗೇಶ್

ನಟ ಜಗ್ಗೇಶ್ ಅವರು ಯಶವಂತಪುರ ವಿಧಾನಸಭೆ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಕೆಲಸ ಮಾಡಿರುವ ಜಗ್ಗೇಶ್ ಅವರಿಗೆ ಇದು ಬಯಸದೇ ಬಂದ ಭಾಗ್ಯವಾಗಿದೆ.

ತಮಗೆ ಬಿ.ಜೆ.ಪಿ. ಟಿಕೆಟ್ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಜಗ್ಗೇಶ್, ಇದು ರಾಯರನ್ನು ನಂಬಿದ್ದಕ್ಕೆ ನನಗೆ ಸಿಕ್ಕ ವರವಾಗಿದೆ. ಬಯಸದಿದ್ದರೂ ನನಗೆ ಧೈರ್ಯತುಂಬಿ ಟಿಕೆಟ್ ನೀಡಿದ್ದಾರೆ. ಎಲ್ಲರೂ ಮೆಚ್ಚುವಂತೆ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಯಶವಂತಪುರ ಕ್ಷೇತ್ರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿತ್ತಾದರೂ, ಅವರೇ ತಾವು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

ಪಕ್ಷದ ಅಭ್ಯರ್ಥಿಗಳ 3 ಪಟ್ಟಿ ಬಿಡುಗಡೆಯಾದಾಗಲೂ ಯಶವಂತಪುರಕ್ಕೆ ಅಭ್ಯರ್ಥಿ ಘೋಷಿಸಿರಲಿಲ್ಲ. 4 ನೇ ಪಟ್ಟಿಯಲ್ಲಿ ಜಗ್ಗೇಶ್ ಅವರಿಗೆ ಟಿಕೆಟ್ ನೀಡಲಾಗಿದೆ. ಕಡೆ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆಯಾಗಿರುವುದರಿಂದ ಗೆಲುವಿಗೆ ಭಾರೀ ಶ್ರಮ ವಹಿಸಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...