alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀದೇವಿಗೆ ಅಭಿಮಾನಿಯಿಂದ ವಿಶಿಷ್ಟ ಶ್ರದ್ದಾಂಜಲಿ

ಖ್ಯಾತ ಬಾಲಿವುಡ್ ನಟಿ ಶ್ರೀದೇವಿ ಕಳೆದ ಶನಿವಾರ ದುಬೈನ ಹೋಟೆಲ್ ನಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದು, ಬುಧವಾರದಂದು ಅವರ ಅಂತ್ಯಕ್ರಿಯೆ ಮುಂಬೈನಲ್ಲಿ ನಡೆದಿದೆ. ಈ ವೇಳೆ ಚಿತ್ರರಂಗದ ಗಣ್ಯರು, ಅಸಂಖ್ಯಾತ ಅಭಿಮಾನಿಗಳು ಅಗಲಿದ ನಟಿಗೆ ತಮ್ಮ ಅಂತಿಮ ನಮನ ಸಲ್ಲಿಸಿದ್ದಾರೆ.

ಶ್ರೀದೇವಿಯವರ ಹಠಾತ್ ನಿಧನದಿಂದ ಕೇವಲ ಬಾಲಿವುಡ್ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗವೇ  ಶಾಕ್ ಗೊಳಗಾಗಿದ್ದು, ಅವರ ಸಾವಿನ ಕುರಿತ ಚರ್ಚೆಗಳು ಈಗಲೂ ನಡೆದಿದೆ. ಶ್ರೀದೇವಿಯವರ ಪತಿ ಬೋನಿ ಕಪೂರ್ ತಮ್ಮಿಬ್ಬರ ನಡುವಿನ ಬಾಂಧವ್ಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರೆ ಈಗ ಪುತ್ರಿ ಜಾಹ್ನವಿ ಕಪೂರ್ ಕೂಡಾ ತಾಯಿ ಜೊತೆಗೆ ಕಳೆದ ಕ್ಷಣಗಳನ್ನು ಸ್ಮರಿಸಿಕೊಂಡಿದ್ದಾರೆ.

ಈ ಮಧ್ಯೆ ಅಭಿಮಾನಿಯೊಬ್ಬ ಶ್ರೀದೇವಿಯವರಿಗೆ ವಿಶಿಷ್ಟವಾಗಿ ಶ್ರದ್ದಾಂಜಲಿ ಸಲ್ಲಿಸಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಕಾಶ್ ಎಂಬ ಈ ಅಭಿಮಾನಿ ಮುಂಬೈ ಲೋಕಲ್ ಟ್ರೈನ್ ನಲ್ಲಿ ಬೊರಿವಿಲಿಗೆ ತೆರಳುತ್ತಿದ್ದ ವೇಳೆ ತನ್ನ ವಾದ್ಯದಿಂದ ಶ್ರೀದೇವಿಯವರು ಅಭಿನಯಿಸಿದ ಚಿತ್ರಗಳ ಹಾಡುಗಳನ್ನು ನುಡಿಸಿದ್ದಾನೆ. ಇದನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿರುವ ಕಲಾವಿದ ವರುಣ್, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...