alex Certify
ಕನ್ನಡ ದುನಿಯಾ       Mobile App
       

Kannada Duniya

ನಟ ಅಮೀರ್ ಖಾನ್ ಪತ್ನಿಯಿಂದ ಪೊಲೀಸರಿಗೆ ದೂರು

Kiran_Rao 456ಖ್ಯಾತ ಬಾಲಿವುಡ್ ನಟ ಅಮೀರ್ ಖಾನ್ ಅವರ ಪತ್ನಿ ಕಿರಣ್ ರಾವ್, ಮುಂಬೈನ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಶನಿವಾರದಂದು ಬಾಂದ್ರಾ- ಕುರ್ಲಾ ಕಾಂಪ್ಲೆಕ್ಸ್ ನ ಸೈಬರ್ ಕ್ರೈಂ ವಿಭಾಗದಲ್ಲಿ ಈ ದೂರು ದಾಖಲಿಸಿದ್ದಾರೆ.

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ತಮ್ಮ ಹೆಸರಿನಲ್ಲಿ ಖಾತೆ ತೆರೆದಿರುವ ಅನಾಮಧೇಯರೊಬ್ಬರು ಕುಟುಂಬ ಸದಸ್ಯರು ಹಾಗೂ ಸ್ನೇಹಿತರ ಜೊತೆಯಲ್ಲಿ ಚಾಟ್ ಮಾಡುತ್ತಿದ್ದಾರೆಂದು ಅವರು ಆರೋಪಿಸಿದ್ದಾರೆ.

ದೂರು ದಾಖಲಾಗಿರುವುದನ್ನು ಖಚಿತಪಡಿಸಿರುವ ಸಹಾಯಕ ಪೊಲೀಸ್ ಕಮೀಷನರ್ ಕೆಎಂಎಂ ಪ್ರಸನ್ನ, ದೂರಿನ ಕುರಿತಂತೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದು, ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ನಕಲಿ ಖಾತೆಯನ್ನು ಗಮನಿಸಿದ ಕಿರಣ್ ರಾವ್ ಅವರ ಸ್ನೇಹಿತರೊಬ್ಬರು ಈ ಕುರಿತು ಅವರಿಗೆ ಮಾಹಿತಿ ನೀಡಿದ್ದು, ಇದನ್ನು ಖುದ್ದು ವೀಕ್ಷಿಸಿದ ಕಿರಣ್ ರಾವ್ ದಂಗಾಗಿದ್ದಾರೆ. ತಮ್ಮ ಫೋಟೋ ಬಳಸಿ ಖಾತೆ ತೆರೆದಿರುವ ಅನಾಮಧೇಯ ವ್ಯಕ್ತಿ, ಕಿರಣ್ ರಾವ್ ಅವರ ಕುಟುಂಬಸ್ಥರು ಹಾಗೂ ಸ್ನೇಹಿತರನ್ನು ಇದರಲ್ಲಿ ಫ್ರೆಂಡ್ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಆ ಬಳಿಕ ಕಿರಣ್ ರಾವ್ ಪೊಲೀಸರಲ್ಲಿ ದೂರು ದಾಖಲಿಸಿ, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...