alex Certify
ಕನ್ನಡ ದುನಿಯಾ       Mobile App
       

Kannada Duniya

ನಟ ದುನಿಯಾ ವಿಜಯ್ ವಿರುದ್ಧ ಎಫ್ಐಆರ್

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ನಟ ದುನಿಯಾ ವಿಜಯ್ ವಿರುದ್ಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮಾಸ್ತಿಗುಡಿ’ ಚಿತ್ರದ ಚಿತ್ರೀಕರಣ ವೇಳೆ ಖಳನಟರಿಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ಮಾಪಕ ಸುಂದರ ಪಿ ಗೌಡ ವಿರುದ್ಧ ದಾಖಲಾಗಿದ್ದ ದೂರಿನನ್ವಯ ಹೊರಡಿಸಲಾಗಿದ್ದ ಜಾಮೀನುರಹಿತ ವಾರಂಟ್ ತಲುಪಿಸಲು ತಾವರೆಕೆರೆ ಠಾಣೆ ಪೊಲೀಸರು ಹೋಗಿದ್ದ ವೇಳೆ ಸುಂದರ ಗೌಡ ಅವರ ಮನೆಯಲ್ಲಿದ್ದ ದುನಿಯಾ ವಿಜಯ್, ಅವರು ತಪ್ಪಿಸಿಕೊಳ್ಳಲು ಸಹಕರಿಸಿದ್ದಾರೆಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ತಾವರಕೆರೆ ಠಾಣೆ ಪೊಲೀಸರು, ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರಿಗೆ ದುನಿಯಾ ವಿಜಯ್ ಅವರ ವಿರುದ್ಧ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಹೊರಿಸಿ ದೂರು ದಾಖಲಿಸಿದ್ದರು. ಹೀಗಾಗಿ ದುನಿಯಾ ವಿಜಯ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...