alex Certify
ಕನ್ನಡ ದುನಿಯಾ       Mobile App
       

Kannada Duniya

ಶಿಲ್ಪಾ ಶೆಟ್ಟಿ, ಸಲ್ಮಾನ್ ಖಾನ್ ಗೆ ಸಂಕಷ್ಟ…!

ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಅವಮಾನ ಮಾಡಿದ್ದಾರೆಂದು ಬಾಲಿವುಡ್ ಸ್ಟಾರ್ ಗಳಾದ ಸಲ್ಮಾನ್ ಖಾನ್ ಮತ್ತು ಶಿಲ್ಪಾ ಶೆಟ್ಟಿ ವಿರುದ್ಧ ಕೇಸ್ ದಾಖಲಾಗಿದೆ. ಟಿವಿ ಶೋ ಒಂದರಲ್ಲಿ ಇವರು ‘ಭಂಗಿ’ ಎಂಬ ಪದ ಬಳಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದೆ.

ಜೈಪುರದಲ್ಲಿ ವಾಲ್ಮೀಕಿ ಸಮುದಾಯದ ಸದಸ್ಯರು ಶಿಲ್ಪಾ ಶೆಟ್ಟಿ ಮತ್ತು ಸಲ್ಮಾನ್ ಖಾನ್ ವಿರುದ್ಧ ಪ್ರತಿಭಟನೆ ಕೂಡ ನಡೆಸಿದ್ದಾರೆ. ಪೋಸ್ಟರ್ ಗಳನ್ನು ಸುಟ್ಟು ಆಕ್ರೋಶ ಹೊರಹಾಕಿದ್ದಾರೆ. ಶಿಲ್ಪಾ ಹಾಗೂ ಸಲ್ಮಾನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಶಿಲ್ಪಾ ಶೆಟ್ಟಿ ಹಾಗೂ ಸಲ್ಮಾನ್ ಖಾನ್ ಇಬ್ಬರೂ ಬೇಷರತ್ ಕ್ಷಮೆ ಕೇಳಬೇಕು ಅನ್ನೋದು ಪ್ರತಿಭಟನಾಕಾರರ ಒತ್ತಾಯ. ಇವರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಕೋಟಾದಲ್ಲಿ ಥಿಯೇಟರ್ ಒಂದನ್ನು ಧ್ವಂಸ ಮಾಡಲು ಯತ್ನ ನಡೆಸಿದ್ದಾರೆ.

ಸಲ್ಮಾನ್ ಹಾಗೂ ಶಿಲ್ಪಾ ವಿರುದ್ಧದ ಪ್ರಕರಣಕ್ಕೆ ಸಂಬಂಧಪಟ್ಟಂತೆ 7 ದಿನಗಳೊಳಗೆ ಉತ್ತರ ನೀಡುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ದೆಹಲಿ ಪೊಲೀಸ್ ಆಯುಕ್ತರು ಹಾಗೂ ಮುಂಬೈ ಪೊಲೀಸ್ ಆಯುಕ್ತರಿಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಸೂಚಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...