alex Certify
ಕನ್ನಡ ದುನಿಯಾ       Mobile App
       

Kannada Duniya

ಹಿಂದಿಯಲ್ಲೂ ಮೂಡಿ ಬರಲಿದೆ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’

ಸ್ಯಾಂಡಲ್ವುಡ್ ನ ಯಶಸ್ವಿ ಚಿತ್ರಗಳಲ್ಲಿ ಒಂದಾದ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಈಗ ಹಿಂದಿಯಲ್ಲೂ ಮೂಡಿ ಬರಲಿದೆ. ನಿರ್ದೇಶಕ ಹೇಮಂತ್ ಎಂ ರಾವ್ ಈ ವಿಷಯವನ್ನು ಖಚಿತಪಡಿಸಿದ್ದು, ತಮ್ಮ ಚಿತ್ರ ಹಿಂದಿಗೆ ರಿಮೇಕ್ ಆಗುತ್ತಿರುವುದಕ್ಕೆ ಸಂತಸವಾಗಿದೆ ಎಂದಿದ್ದಾರೆ.

ಅನಂತ್ ನಾಗ್, ರಕ್ಷಿತ್ ಶೆಟ್ಟಿ, ತ್ರಿವೇಣಿ ಚಿಂದೋಡಿ, ಶೃತಿ ಹರಿಹರನ್, ಅಚ್ಯುತ್ ಕುಮಾರ್, ವಸಿಷ್ಠ ಎನ್ ಸಿಂಹ, ರಾಧಾ ರಾಮಚಂದ್ರ, ಎ‍‍ಚ್.ಜಿ. ದತ್ತಾತ್ರೇಯ, ರವಿಕಿರಣ್ ಮೊದಲಾದವರು ಪ್ರಮುಖ ತಾರಾಗಣದಲ್ಲಿದ್ದ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಸ್ಯಾಂಡಲ್ವುಡ್ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ಈ ಚಿತ್ರದ ತಮಿಳು ಮತ್ತು ತೆಲುಗು ರಿಮೇಕ್ ಹಕ್ಕು ಪಡೆದುಕೊಂಡಿದ್ದ ನಟ ಪ್ರಕಾಶ್ ರಾಜ್, ಹಿಂದಿಯಲ್ಲೂ ನಿರ್ಮಿಸುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಇದೀಗ ವಿ.ಎಲ್. ಪ್ರೊಡಕ್ಷನ್ ಸಂಸ್ಥೆ ಈ ಚಿತ್ರವನ್ನು ನಿರ್ಮಿಸಲಿದೆ ಎನ್ನಲಾಗಿದ್ದು, ಪಾತ್ರವರ್ಗದ ಮಾಹಿತಿ ಬಹಿರಂಗವಾಗಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...