alex Certify
ಕನ್ನಡ ದುನಿಯಾ       Mobile App
       

Kannada Duniya

ಕಿಚ್ಚ ಸುದೀಪ್-ಜೋಗಿ ಪ್ರೇಮ್ ವಿರುದ್ಧ ದೂರು

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿನಯದ, ಜೋಗಿ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಚಿತ್ರ ಈಗಾಗಲೆ ಬಿಡುಗಡೆಯಾಗಿದ್ದು, ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ.

ಇದರ ಮಧ್ಯೆ, ಚಿತ್ರದ ಹಾಡೊಂದರಲ್ಲಿನ ದೃಶ್ಯದ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ಸಂಘಟನೆಗಳ ಒಕ್ಕೂಟ, ಕಿಚ್ಚ ಸುದೀಪ್ ಹಾಗೂ ಜೋಗಿ ಪ್ರೇಮ್ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಸಲ್ಲಿಸಿದೆ.

ಈ ಹಾಡಿನ ದೃಶ್ಯದಲ್ಲಿ ಸುದೀಪ್, ಕನ್ನಡ ಬಾವುಟವನ್ನು ಸೊಂಟಕ್ಕೆ ಸುತ್ತಿಕೊಳ್ಳುವ ಮೂಲಕ ಅವಮಾನ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್.ಎ. ಚಿನ್ನೇಗೌಡ, ಚಿತ್ರ ಬಿಡುಗಡೆಯಾಗಿ ಈಗಾಗಲೇ ತುಂಬ ದಿನಗಳಾಗಿವೆ. ಅಲ್ಲದೆ ಸೆನ್ಸಾರ್ ಮಂಡಳಿ ಕೂಡ ಅನುಮತಿ ಸೂಚಿಸಿರುವ ಹಿನ್ನೆಲೆಯಲ್ಲಿ ಈಗ ಏನು ಮಾಡಲು ಸಾಧ್ಯವಿಲ್ಲವೆಂದು ಹೇಳಿ ಕಳುಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...