alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೊಂದು ವಿವಾದದಲ್ಲಿ ಸಿಲುಕಿದ ಬಾಲಿವುಡ್ ನಟಿ

hema 123

ಮುಂಬೈ: ನೃತ್ಯ ಅಕಾಡೆಮಿ ಆರಂಭಿಸುವುದಾಗಿ ಹೇಳಿ, ಮಹಾರಾಷ್ಟ್ರ ಸರ್ಕಾರದಿಂದ ಕಡಿಮೆ ಬೆಲೆಗೆ ಭೂಮಿ ಪಡೆದುಕೊಂಡು ಬಾಲಿವುಡ್ ನಟಿ ಹೇಮಾ ಮಾಲಿನಿ ಆರೋಪಕ್ಕೆ ಗುರಿಯಾಗಿದ್ದರು. ಇದೀಗ ಮತ್ತೊಂದು ಆರೋಪ ಅವರ ವಿರುದ್ಧ ಕೇಳಿಬಂದಿದೆ.

ಕೋಟ್ಯಂತರ ರೂ. ಬೆಲೆಯ ಭೂಮಿಯನ್ನು ತೀರಾ ಕಡಿಮೆ ಬೆಲೆಗೆ ಮಹಾರಾಷ್ಟ್ರ ಸರ್ಕಾರದಿಂದ ಮಂಜೂರು ಮಾಡಿಸಿಕೊಂಡಿದ್ದ ಹೇಮಾಮಾಲಿನಿ ಮತ್ತೊಂದು ವಿವಾದಕ್ಕೆ ಗುರಿಯಾಗಿದ್ದಾರೆ. ನಾಟ್ಯವಿಹಾರ ಕಲಾ ಕೇಂದ್ರ ಚಾರಿಟಿ ಟ್ರಸ್ಟ್ ಗೆ ನೀಡಲಾಗಿದ್ದ ಭೂಮಿಯಲ್ಲಿ ಕರಾವಳಿ ನಿಯಂತ್ರಣ ವಲಯ ಕಾನೂನುಗಳನ್ನು ಗಾಳಿಗೆ ತೂರಿ ಕಾಂಡ್ಲಾ ಕಾಡನ್ನು ಅವರು ನಾಶಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮುಂಬೈನ ಮಾಹಿತಿ ಹಕ್ಕು ಕಾರ್ಯಕರ್ತರೊಬ್ಬರು ಈ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

ಅನಿಲ್ ಗಲಗಲಿ ಎಂಬ ಮಾಹಿತಿ ಹಕ್ಕು ಕಾರ್ಯಕರ್ತ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದು, ಮುಂಬೈನ ಅಂಧೇರಿ ತಾಲ್ಲೂಕಿನಲ್ಲಿ 1741.89 ಚದರ ಮೀಟರ್ ಜಾಗವನ್ನು 1997ರಲ್ಲಿ ಹೇಮಾಮಾಲಿನಿ ಅವರಿಗೆ ನೀಡಲಾಗಿತ್ತು. ಅವರು, ನಿಯಮ ಮೀರಿ ಕಾಂಡ್ಲಾ ಕಾಡನ್ನು ನಾಶಪಡಿಸಿದ್ದರಿಂದ 1998ರಲ್ಲಿ ಮುಂಬೈ ಉಪನಗರ ಜಿಲ್ಲಾಧಿಕಾರಿ ನೋಟೀಸ್ ನೀಡಿದ್ದರು ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...