alex Certify
ಕನ್ನಡ ದುನಿಯಾ       Mobile App
       

Kannada Duniya

ಲೋಕಸಭಾ ಚುನಾವಣೆಗೆ ತವರು ಜಿಲ್ಲೆ ಮಂಡ್ಯದಿಂದ ಸ್ಪರ್ಧಿಸ್ತಾರಂತೆ ಹುಚ್ಚ ವೆಂಕಟ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಹೀನಾಯ ಸೋಲುಂಡಿದ್ದ ನಟ-ನಿರ್ದೇಶಕ ಹುಚ್ಚ ವೆಂಕಟ್ ಈಗ 2019 ರ ಲೋಕಸಭಾ ಚುನಾವಣೆಯಲ್ಲಿ ತವರೂರು ಮಂಡ್ಯ ಜಿಲ್ಲೆಯಿಂದ ಸ್ಪರ್ಧಿಸುತ್ತಾರಂತೆ.

ಹೀಗಂತ ಸ್ವತಃ ಹುಚ್ಚ ವೆಂಕಟ್ ಹೇಳಿಕೆ ನೀಡಿದ್ದು, ಲೋಕಸಭಾ ಚುನಾವಣೆಗೆ ತನ್ನ ತವರೂರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದಿದ್ದಾರೆ. ಮಂಡ್ಯದ ಜನರು ಲೋಕಸಭಾ ಚುನಾವಣೆಯಲ್ಲಿ ನನ್ನ ಕೈ ಹಿಡಿಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅವರು, ಒಂದು ವೇಳೆ ಕೈ ಬಿಟ್ಟರೂ ಅದಕ್ಕೆ ಬಲವಾದ ಕಾರಣ ಇರುತ್ತೆ ಎಂತಲೂ ಹೇಳಿದ್ದಾರೆ.

ಇದೇ ವೇಳೆ ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ವೆಂಕಟ್, ಈ ಸರ್ಕಾರ ಹೆಚ್ಚು ದಿನ ಇರಲ್ಲ, ಶೀಘ್ರದಲ್ಲಿ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಉತ್ತಮ ಕೆಲಸಗಳನ್ನು ಮಾಡುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಅವರು ಮತ್ತೆ ಪ್ರಧಾನಿಯಾಗಿ ಆಯ್ಕೆಯಾಗಲಿದ್ದಾರೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...