alex Certify
ಕನ್ನಡ ದುನಿಯಾ       Mobile App
       

Kannada Duniya

ಬರ್ತಡೇ ಸಂಭ್ರಮದಲ್ಲಿ ನವರಸ ನಾಯಕ ಜಗ್ಗೇಶ್

ನವರಸ ನಾಯಕ ಜಗ್ಗೇಶ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರ ನಟನೆಯ ಬಹುನಿರೀಕ್ಷೆಯ ‘8 ಎಂಎಂ’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಎಸ್. ಹರಿಕೃಷ್ಣ ನಿರ್ದೇಶನದಲ್ಲಿ, ನಾರಾಯಣಸ್ವಾಮಿ, ಇನ್ ಫ್ಯಾಂಟ್ ಪ್ರದೀಪ್, ಸಲೀಮ್ ಷಾ ಅವರ ನಿರ್ಮಾಣದಲ್ಲಿ ‘8 ಎಂಎಂ’ ಚಿತ್ರ ಮೂಡಿ ಬಂದಿದೆ.

ಜಗ್ಗೇಶ್ ಹಿಂದೆಂದೂ ಕಾಣಿಸಿಕೊಳ್ಳದ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಅಭಿಮಾನಿಗಳು ಮಾತ್ರವಲ್ಲ, ಸಿನಿರಸಿಕರಲ್ಲಿಯೂ ಚಿತ್ರ ಕುತೂಹಲ ಮೂಡಿಸಿದೆ. ಇದೇ ವೇಳೆ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಜಗ್ಗೇಶ್, ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ.

ಪತ್ನಿ ಸಮೇತರಾಗಿ ಕೊಲ್ಲೂರಿಗೆ ತೆರಳಿದ ಜಗ್ಗೇಶ್ ನವಚಂಡಿಕಾಯಾಗ ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ತಂದೆ, ತಾಯಿ ಸೇರಿ ಎಲ್ಲರಿಗೂ ನಮನ ಸಲ್ಲಿಸಿದ್ದಾರೆ. ಅಭಿಮಾನಿಗಳು ನೆಚ್ಚಿನ ನಟನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...