alex Certify
ಕನ್ನಡ ದುನಿಯಾ       Mobile App
       

Kannada Duniya

ಸಾವಿರಾರು ಜನರ ಸಮ್ಮುಖದಲ್ಲೇ ಕಣ್ಣೀರಿಟ್ಟ ಖ್ಯಾತ ನಟ…!

ಟಾಲಿವುಡ್ ಚಿತ್ರರಂಗದ ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ತಮ್ಮ ಅಭಿನಯದ ಚಿತ್ರವೊಂದರ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಸಹಸ್ರಾರು ಅಭಿಮಾನಿಗಳು ಸಮ್ಮುಖದಲ್ಲೇ ಕಣ್ಣೀರಿಟ್ಟ ಘಟನೆ ನಡೆದಿದೆ.

ಜೂನಿಯರ್ ಎನ್.ಟಿ.ಆರ್. ಅಭಿನಯದ ‘ಅರವಿಂದ ಸಮೇತ ವೀರ ರಾಘವ’ ಚಿತ್ರದ ರಿಲೀಸ್ ಕಾರ್ಯಕ್ರಮದಲ್ಲಿ ಇಂಥದ್ದೊಂದು ಭಾವುಕ ಘಟನೆ ನಡೆದಿದ್ದು, ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ಇತ್ತೀಚೆಗೆ ನಡೆದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ತಮ್ಮ ತಂದೆ ಹರಿಕೃಷ್ಣ ಅವರನ್ನು ನೆನೆದು ಜೂನಿಯರ್ ಎನ್.ಟಿ.ಆರ್. ಕಣ್ಣೀರಿಟ್ಟಿದ್ದಾರೆ.

ತಾವು ಇದುವರೆಗೂ 27 ಚಿತ್ರಗಳಲ್ಲಿ ಅಭಿನಯಿಸಿದ್ದು, ಯಾವುದೇ ಚಿತ್ರಗಳಲ್ಲೂ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡುವ ದೃಶ್ಯವಿರಲಿಲ್ಲ. ಆದರೆ ಈ ಚಿತ್ರದಲ್ಲಿ ಅಂತಹ ದೃಶ್ಯವಿದ್ದು, ಇದರ ಚಿತ್ರೀಕರಣ ಮುಗಿದ ಬೆನ್ನಲ್ಲೇ ನಿಜ ಜೀವನದಲ್ಲಿ ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಬೇಕಾದ ಸನ್ನಿವೇಶ ಎದುರಾಯಿತು ಎಂದು ಜೂನಿಯರ್ ಎನ್.ಟಿ.ಆರ್. ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ಭಾವುಕರಾಗಿ ಹೇಳಿ ಕಣ್ಣೀರಿಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...