alex Certify
ಕನ್ನಡ ದುನಿಯಾ       Mobile App
       

Kannada Duniya

ಕಮಲ್ ಹಾಸನ್ ಅಭಿಮಾನಿಗಳಿಗೊಂದು ಸುದ್ದಿ

Kamal-Haasan 24

ಚೆನ್ನೈ: ಯುನಿವರ್ಸಲ್ ಸ್ಟಾರ್ ಕಮಲ್ ಹಾಸನ್ ಅವರ ಕಾಲಿಗೆ ಮೈನರ್ ಸರ್ಜರಿ ಮಾಡಿದ್ದು, ಅವರು ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಇತ್ತೀಚೆಗಷ್ಟೇ ಮನೆಯಲ್ಲಿ ಕಾಲು ಜಾರಿ ಬಿದ್ದ ಕಮಲ್ ಹಾಸನ್ ಪೆಟ್ಟು ಮಾಡಿಕೊಂಡಿದ್ದರು.

ಕೂಡಲೇ ಅವರನ್ನು ಚೆನ್ನೈನ ಪ್ರತಿಷ್ಠಿತ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಚಿಕಿತ್ಸೆ ನೀಡಿದ್ದು, ನಂತರ, ಮೈನರ್ ಸರ್ಜರಿ ಮಾಡಿದ್ದಾರೆ. ಇದರಿಂದಾಗಿ ಕಮಲ್ ಹಾಸನ್ ಆಸ್ಪತ್ರೆಯಲ್ಲೇ ಸುಮಾರು 10 ದಿನಗಳಿಂದ ಉಳಿದುಕೊಂಡಿದ್ದಾರೆ. ಸಿನಿಮಾ ಕೆಲಸಗಳನ್ನು ಮುಂದೂಡಲಾಗಿದೆ. ವೈದ್ಯರು 1 ತಿಂಗಳು ವಿಶ್ರಾಂತಿ ಪಡೆಯುವಂತೆ ಸೂಚಿಸಿದ ಹಿನ್ನಲೆಯಲ್ಲಿ ಕಮಲ್ ಹಾಸನ್ ಸದ್ಯ ಆಸ್ಪತ್ರೆಯಲ್ಲೇ ಉಳಿದುಕೊಂಡಿದ್ದು, ಒಂದೆರಡು ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿದೆ.

ಕಾಲುಜಾರಿ ಬಿದ್ದ ಕಮಲ್ ಹಾಸನ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಮೈನರ್ ಸರ್ಜರಿ ಮಾಡಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಮಲ್, ಅಭಿಮಾನಿಗಳ ಕಾಳಜಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಕೆಲವೇ ದಿನಗಳಲ್ಲಿ ಮನೆಗೆ ಮರಳುತ್ತೇನೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...