alex Certify
ಕನ್ನಡ ದುನಿಯಾ       Mobile App
       

Kannada Duniya

ಶುರುವಾಯ್ತು ಕಮಲ್ ಹಾಸನ್ ಪೊಲಿಟಿಕ್ಸ್

ಚೆನ್ನೈ: ಸೂಪರ್ ಸ್ಟಾರ್ ಕಮಲ್ ಹಾಸನ್ ರಾಜಕೀಯ ಪ್ರವೇಶದ ಕುರಿತಾಗಿ ಭಾರೀ ಚರ್ಚೆಯಾಗ್ತಿದೆ. ಇದೇ ಸಂದರ್ಭದಲ್ಲಿ ಅವರು ಚೆನ್ನೈನ ಎನ್ನೋರ್ ಗೆ ಭೇಟಿ ನೀಡಿ ಮೀನುಗಾರರ ಸಮಸ್ಯೆಗಳನ್ನು ಆಲಿಸಿದ್ದಾರೆ.

ಕೊಸಸ್ಥಳಯಾರ್ ನದಿ ಪ್ರದೇಶಕ್ಕೆ ಹೊಂದಿಕೊಂಡಂತೆ ಮೀನುಗಾರರು ವಾಸವಾಗಿದ್ದು, ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಜಯರಾಮನ್ ಅವರು, ಎನ್ನೋರ್ ಪ್ರದೇಶದಲ್ಲಿ ಸ್ಥಳೀಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಕಮಲ್ ಹಾಸನ್ ಗಮನಕ್ಕೆ ತಂದಿದ್ದು, ಅದರಂತೆ ಕಮಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ವಿದ್ಯುತ್ ಸ್ಥಾವರಗಳಿಂದ ಹಾರುವ ಬೂದಿ, ತೈಲ ಘಟಕಗಳ ಕಾರಣದಿಂದ ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮಳೆಗಾಲದಲ್ಲಿ ಆಗುವ ಸಮಸ್ಯೆಗಳ ಬಗ್ಗೆ ತಿಳಿಸಿದ್ದಾರೆ.

ತಾಳ್ಮೆಯಿಂದ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದ ಕಮಲ್ ಹಾಸನ್, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರದ ಜೊತೆ ಮಾತನಾಡುವುದಾಗಿ ಭರವಸೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...