alex Certify
ಕನ್ನಡ ದುನಿಯಾ       Mobile App
       

Kannada Duniya

ಸಖತ್ ಸೌಂಡ್ ಮಾಡ್ತಿದೆ ‘ಕನಕ’ ಟ್ರೇಲರ್

‘ದುನಿಯಾ’ ವಿಜಯ್ ಅಭಿನಯದ ‘ಕನಕ’ ಚಿತ್ರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡ್ತಿದೆ. ಆರ್. ಚಂದ್ರು ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಕನಕ’ ಆರಂಭದಿಂದಲೂ ಭಾರೀ ನಿರೀಕ್ಷೆ ಮೂಡಿಸಿದೆ.

ಮಾಸ್ ಡೈಲಾಗ್, ಆಕ್ಷನ್ ಸೀನ್, ಹಾಡುಗಳಿಂದಾಗಿ ಈಗಾಗಲೇ ಗಮನ ಸೆಳೆದಿರುವ ಈ ಚಿತ್ರದಲ್ಲಿ ಮಾನ್ವಿತಾ, ಹರಿಪ್ರಿಯ, ಸಾಧುಕೋಕಿಲ, ಬುಲೆಟ್ ಪ್ರಕಾಶ್, ರವಿಶಂಕರ್ ಮೊದಲಾದ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ.

ಆರ್. ಚಂದ್ರು ನಿರ್ದೇಶನದೊಂದಿಗೆ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನವೀನ್ ಸಜ್ಜು ಸಂಗೀತ ನೀಡಿದ್ದಾರೆ. ಸತ್ಯ ಹೆಗ್ಡೆ ಛಾಯಾಗ್ರಹಣ ಚಿತ್ರಕ್ಕಿದೆ.

ಕನ್ನಡ ರಾಜ್ಯೋತ್ಸವದ ವಿಶೇಷವಾಗಿ ರಿಲೀಸ್ ಆಗಿದ್ದ ಚಿತ್ರದ ಟ್ರೇಲರ್ ಅನ್ನು ಯುಟ್ಯೂಬ್ ನಲ್ಲಿ ಸುಮಾರು 11 ಲಕ್ಷ ಮಂದಿ, ಫೇಸ್ ಬುಕ್ ನಲ್ಲಿ ಸುಮಾರು 18 ಲಕ್ಷ ಮಂದಿ ವೀಕ್ಷಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...