alex Certify
ಕನ್ನಡ ದುನಿಯಾ       Mobile App
       

Kannada Duniya

ಪಂಚಭೂತಗಳಲ್ಲಿ ಲೀನರಾದ ಕಾಶಿನಾಥ್

ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಳಿಗ್ಗೆ ನಿಧನರಾದ ಹಿರಿಯ ನಟ, ನಿರ್ಮಾಪಕ ಕಾಶಿನಾಥ್ ಅವರ ಅಂತ್ಯಕ್ರಿಯೆ ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯಲ್ಲಿ ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿದೆ.

ಮೊದಲಿಗೆ ಕಾಶಿನಾಥ್ ಅವರ ಪಾರ್ಥಿವ ಶರೀರವನ್ನು ಮನೆಗೆ ತಂದು ಅಂತಿಮ ಕಾರ್ಯಗಳನ್ನು ನಡೆಸಲಾಗಿದೆ. ದುಬೈನಿಂದ ಆಗಮಿಸಿದ್ದ ಪುತ್ರಿ ಅಮೃತವರ್ಷಿಣಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಮನೆಯವರೆಲ್ಲಾ ಪೂಜೆ ನೆರವೇರಿಸಿ, ಅಲ್ಲಿಂದ ರುದ್ರಭೂಮಿಗೆ ಪಾರ್ಥಿವ ಶರೀರವನ್ನು ತರಲಾಯಿತು. ಸಾವಿರಾರು ಸಂಖ್ಯೆಯಲ್ಲಿದ್ದ ಅಭಿಮಾನಿಗಳು ಅಗಲಿದ ನಟನಿಗೆ ಕಂಬನಿ ಮಿಡಿದಿದ್ದಾರೆ.

ಪಾರ್ಥಿವ ಶರೀರದ ಮೆರವಣಿಗೆ ಸಾಗಿದ ರಸ್ತೆಯ ಎರಡೂ ಬದಿಯಲ್ಲಿ ನಿಂತಿದ್ದ ಅಪಾರ ಸಂಖ್ಯೆಯ ಜನ ನಮನ ಸಲ್ಲಿಸಿದ್ದಾರೆ. ರುದ್ರಭೂಮಿಯಲ್ಲಿ 5 ರೀತಿಯ ಮರಗಳ ಕಟ್ಟಿಗೆಗಳಿಂದ ಚಿತೆಯನ್ನು ಸಿದ್ಧಪಡಿಸಲಾಗಿತ್ತು. ಕಾಶಿನಾಥ್ ಪುತ್ರ ಅಭಿಮನ್ಯು ಹಾಗೂ ಕುಟುಂಬದವರು ಅಂತಿಮ ವಿಧಿ ವಿಧಾನ ನೆರವೇರಿಸಿದ್ದಾರೆ. ನಂತರ ಅಭಿಮನ್ಯು ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದಾರೆ. ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಗಿದೆ. ಕಾಶಿನಾಥ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...