alex Certify
ಕನ್ನಡ ದುನಿಯಾ       Mobile App
       

Kannada Duniya

ಹೊಸ ಟ್ರೆಂಡ್ ಸೃಷ್ಠಿಸಿದ್ದ ಅಪರೂಪದ ಕಲಾವಿದ ಕಾಶಿನಾಥ್

1975 ರಲ್ಲಿ ‘ಅಪರೂಪದ ಅತಿಥಿಗಳು’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ ಕಾಶಿನಾಥ್, ಇತ್ತೀಚಿನ ‘ಚೌಕ’ ಸಿನಿಮಾದವರೆಗೆ ಸುಮಾರು 43 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

80 ರ ದಶಕದಲ್ಲಿ ಜನಪ್ರಿಯ ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಅವರು ಖ್ಯಾತರಾಗಿದ್ದು, ಹಲವಾರು ಹೊಸ ಕಲಾವಿದರಿಗೆ ಅವಕಾಶ ನೀಡಿದ್ದರು.

2 ದಿನಗಳ ಹಿಂದೆ ಅನಾರೋಗ್ಯದ ಕಾರಣ ಅವರನ್ನು ಶ್ರೀಶಂಕರ್ ಕ್ಯಾನ್ಸರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪತ್ನಿ, ಇಬ್ಬರು ಮಕ್ಕಳನ್ನು ಕಾಶೀನಾಥ್ ಅಗಲಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಕುಂದಾಪುರ ಮೂಲದ ಕಾಶಿನಾಥ್ ಅವರು ‘ಅನುಭವ’ ಚಿತ್ರದ ಮೂಲಕ ಜನಪ್ರಿಯರಾಗಿದ್ದರು. ವಿಭಿನ್ನ ಶೈಲಿಯ ಚಿತ್ರಗಳ ಮೂಲಕ ಅವರು ಗಮನ ಸೆಳೆದಿದ್ದರು. ಅಲ್ಲದೇ, ಹೊಸ ಟ್ರೆಂಡ್ ಸೃಷ್ಠಿಸಿದ್ದ ಅಪ್ರತಿಮ ಕಲಾವಿದರಾಗಿದ್ದರು.

‘ಅಜಗಜಾಂತರ’, ‘ಅವಳೇ ನನ್ನ ಹೆಂಡ್ತಿ’, ‘ಅನಾಮಿಕ’, ‘ಅನಂತನ ಅವಾಂತರ’, ‘ಅವನೇ ನನ್ನ ಗಂಡ’, ‘ಪೋಲಿ ಕಿಟ್ಟಿ’, ‘ಚೌಕ’, ‘ಶ್’ ಮೊದಲಾದ ಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು. ಕಾಶಿನಾಥ್ ಅವರು 11 ಕನ್ನಡ, 1 ಹಿಂದಿ ಹಾಗೂ 1 ತೆಲುಗು ಚಿತ್ರವನ್ನು ನಿರ್ಮಿಸಿದ್ದಾರೆ.

ಸುರೇಶ್ ಹೆಬ್ಳೀಕರ್ ಅಭಿನಯದ ‘ಅಪರಿಚಿತ’ ಸೇರಿ ಹಲವಾರು ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು. ರಿಯಲ್ ಸ್ಟಾರ್ ಉಪೇಂದ್ರ, ವಿ. ಮನೋಹರ್ ಮೊದಲಾದವರನ್ನು ಕಾಶೀನಾಥ್ ಪರಿಚಯಿಸಿದ್ದಾರೆ. ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...