alex Certify
ಕನ್ನಡ ದುನಿಯಾ       Mobile App
       

Kannada Duniya

ಯಶ್ ‘ಕೆ.ಜಿ.ಎಫ್.’ಗಾಗಿ ಕಾತರದಲ್ಲಿದ್ದವರಿಗೆ ಇಲ್ಲಿದೆ ಖುಷಿ ಸುದ್ದಿ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆ.ಜಿ.ಎಫ್.’ ಯಾವಾಗ ತೆರೆ ಕಾಣುತ್ತೆ ಎಂಬ ಕುತೂಹಲ ಸಿನಿರಸಿಕರಲ್ಲಿ ಹೆಚ್ಚಾಗಿದೆ. ‘ಸಂತೂ ಸ್ಟ್ರೈಟ್ ಫಾರ್ವರ್ಡ್’ ಬಳಿಕ ವರ್ಷ ಕಳೆದರೂ ಯಶ್ ಸಿನಿಮಾ ರಿಲೀಸ್ ಆಗಿಲ್ಲ. ಯಶ್ ಅವರನ್ನು ತೆರೆ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರಿಸುತ್ತಿದ್ದಾರೆ.

ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ‘ಕೆ.ಜಿ.ಎಫ್.’ ಚಿತ್ರದಲ್ಲಿ ಶ್ರೀನಿಧಿ ಶೆಟ್ಟಿ, ಅನಂತನಾಗ್, ವಸಿಷ್ಠ ಸಿಂಹ, ನಾಜರ್ ಮೊದಲಾದವರು ಅಭಿನಯಿಸಿದ್ದಾರೆ.

ವಿಜಯ್ ಕಿರಗಂದೂರು ನಿರ್ಮಾಣದಲ್ಲಿ, ‘ಉಗ್ರಂ’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಚಿತ್ರ ಮೂಡಿ  ಬರುತ್ತಿದ್ದು, ಆರಂಭದಿಂದಲೂ ಭಾರೀ ನಿರೀಕ್ಷೆ ಮೂಡಿಸಿದೆ.

ಕೆ.ಜಿ.ಎಫ್. ಬಳಿ ಅದ್ಧೂರಿಯಾಗಿ ನಿರ್ಮಿಸಿದ ವಿಶೇಷ ಸೆಟ್ ನಲ್ಲಿ ಹಾಗೂ ವಿವಿಧ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಯಶ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಪೋಸ್ಟರ್ ಗಳು ಹಲ್ ಚಲ್ ಎಬ್ಬಿಸಿವೆ. ಕನ್ನಡ ಮಾತ್ರವಲ್ಲದೇ, ತೆಲುಗು, ತಮಿಳು, ಹಿಂದಿಯಲ್ಲಿ ‘ಕೆ.ಜಿ.ಎಫ್.’ ನಿರ್ಮಾಣವಾಗುತ್ತಿದೆ. ಈ ವೇಳೆಗಾಗಲೇ ಬಿಡುಗಡೆಯಾಗಬೇಕಿದ್ದ ಚಿತ್ರದ ಕೆಲಸಗಳು ಪೂರ್ಣಗೊಳ್ಳುವ ಹಂತಕ್ಕೆ ಬಂದಿವೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಏಪ್ರಿಲ್ ವೇಳೆಗೆ ಚಿತ್ರ ತೆರೆಗೆ ಬರುವ ನಿರೀಕ್ಷೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...