alex Certify
ಕನ್ನಡ ದುನಿಯಾ       Mobile App
       

Kannada Duniya

ನೆಚ್ಚಿನ ನಟ ಕಿಚ್ಚ ಸುದೀಪ್ ಗೆ ಹುಟ್ಟುಹಬ್ಬದ ಶುಭ ಕೋರಲು ಅಭಿಮಾನಿಗಳ ಜನ ಸಾಗರ

ಖ್ಯಾತ ನಟ ಕಿಚ್ಚ ಸುದೀಪ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ತಮ್ಮ ಮೆಚ್ಚಿನ ನಟನಿಗೆ ಶುಭ ಕೋರಲು ಅಭಿಮಾನಿಗಳ ಜನಸಾಗರವೇ ಸುದೀಪ್ ಅವರ ಜೆ.ಪಿ. ನಗರ ನಿವಾಸದ ಮುಂದೆ ನೆರೆದಿದೆ.

ಕಳೆದ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲವೆಂದು ಹೇಳಿದ್ದ ಸುದೀಪ್, ಈ ಬಾರಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಮುಂದಾಗಿರುವುದು ಅಭಿಮಾನಿಗಳ ಸಂಭ್ರಮವನ್ನು ಇಮ್ಮಡಿಸಿದೆ.

ಹೀಗಾಗಿ ಅಭಿಮಾನಿಗಳು ಸುದೀಪ್ ಅವರ ಮನೆ ಮುಂದೆ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದು, ಅವರುಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಇಂದಿನ ದಿನವನ್ನು ಸುದೀಪ್ ಅಭಿಮಾನಿಗಳಿಗಾಗಿಯೇ ಮೀಸಲಾಗಿಟ್ಟಿರುವುದು ವಿಶೇಷ.

ತಮಗಾಗಿ ಯಾವುದೇ ಉಡುಗೊರೆ ತರದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿರುವ ಸುದೀಪ್, ನೆರೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕೊಡಗಿನ ಜನತೆಗೆ ನೆರವಾಗುವಂತೆ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...