alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಕೀಯ ಒತ್ತಡದ ನಡುವೆಯೂ ಪುತ್ರನ ಶೂಟಿಂಗ್ ವೀಕ್ಷಿಸಿದ ಸಿಎಂ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜುಲೈ 5 ರಂದು ಮೈತ್ರಿ ಕೂಟ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದು, ಇದಕ್ಕಾಗಿಯೇ ಸಿದ್ಧತೆ ನಡೆಸಿದ್ದಾರೆ. ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗಳು ಸರ್ಕಾರವನ್ನು ಸಂದಿಗ್ಧತೆಗೆ ಸಿಲುಕಿಸಿದೆ.

ಇಂತಹ ಒತ್ತಡಗಳ ನಡುವೆಯೂ ಕೊಂಚ ಬಿಡುವು ಮಾಡಿಕೊಂಡ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪತ್ನಿ ಅನಿತಾ ಕುಮಾರಸ್ವಾಮಿಯವರೊಂದಿಗೆ ತಮ್ಮ ಪುತ್ರ ನಿಖಿಲ್ ಕುಮಾರ್ ಅಭಿನಯಿಸುತ್ತಿರುವ ‘ಸೀತಾರಾಮ ಕಲ್ಯಾಣ’ ಚಿತ್ರದ ಚಿತ್ರೀಕರಣ ಸೆಟ್ ಗೆ ಭೇಟಿ ನೀಡಿದ್ದಾರೆ.

ಕೆಲ ಸಮಯ ಚಿತ್ರೀಕರಣ ವೀಕ್ಷಿಸಿದ ಕುಮಾರಸ್ವಾಮಿಯವರು ಮಗನ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಸೀತಾರಾಮ ಕಲ್ಯಾಣ’ ಚಿತ್ರ ಕುಮಾರಸ್ವಾಮಿಯವರ ಚಿನ್ನಾಂಬಿಕಾ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದ್ದು, ಹರ್ಷ ನಿರ್ದೇಶಿಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...