alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಕೀಯ ಅಖಾಡಕ್ಕಿಳಿದ ಹೆಚ್.ಡಿ.ಕೆ. ಪುತ್ರ ನಿಖಿಲ್

ರಾಜಕಾರಣದಲ್ಲಿ ಗುರುತಿಸಿಕೊಳ್ಳದೆ ಚಿತ್ರರಂಗದಲ್ಲಿ ಮುಂದುವರಿಯುವ ಅಭಿಲಾಷೆ ಹೊಂದಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಂದೆ ಪರ ಪ್ರಚಾರ ಕೈಗೊಂಡಿದ್ದರು.

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಯಾವುದೇ ಪಕ್ಷಕ್ಕೆ ಬಹುಮತ ಸಿಗದ ಹಿನ್ನಲೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಗೆ ಬೇಷರತ್ ಬೆಂಬಲ ಘೋಷಿಸಿದ್ದು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷ ಬಿಜೆಪಿ, ಕಾಂಗ್ರೆಸ್ ಗಿಂತ ಕಡಿಮೆ ಸಂಖ್ಯಾಬಲ ಹೊಂದಿದ್ದರೂ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗುವ ಅವಕಾಶ ನಿರಾಯಾಸವಾಗಿ ಒದಗಿ ಬಂದಿತ್ತು.

ಆದರೆ ರಾಜ್ಯಪಾಲ ವಜೂಭಾಯ್ ವಾಲಾ, ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಬಿಜೆಪಿಗೆ ಅಧಿಕಾರ ಸ್ವೀಕಾರಕ್ಕೆ ಆಹ್ವಾನಿಸಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳನ್ನು ಕೆರಳಿಸಿದ್ದು, ರಾಜ್ಯಪಾಲರ ನಿರ್ಧಾರದ ವಿರುದ್ದ ಪ್ರತಿಭಟನೆ ಕೈಗೊಂಡಿದ್ದಾರೆ. ಅಷ್ಟೇ ಅಲ್ಲ, ಬಿಜೆಪಿಯ ‘ಆಪರೇಷನ್ ಕಮಲ’ದ ಆತಂಕದಿಂದ ತಮ್ಮ ಪಕ್ಷದ ಶಾಸಕರನ್ನು ರಕ್ಷಿಸಿಕೊಳ್ಳುವ ಸಲುವಾಗಿ ರೆಸಾರ್ಟ್ ರಾಜಕಾರಣಕ್ಕೆ ಮೊರೆ ಹೋಗಿದ್ದಾರೆ.

ಕಾಂಗ್ರೆಸ್ ಶಾಸಕರು ರಾಮನಗರ ತಾಲೂಕಿನ ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್ ನಲ್ಲಿದ್ದರೆ, ಜೆಡಿಎಸ್ ಶಾಸಕರು ಶಾಂಗ್ರಿಲಾ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಯಾವಾಗ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರೋ ತಮ್ಮ ಶಾಸಕರುಗಳು ಎಲ್ಲಿ ಬದಲಾಗುವರೋ ಎಂಬ ಆತಂಕದಲ್ಲಿರುವ ಕಾಂಗ್ರೆಸ್-ಜೆಡಿಎಸ್ ನಾಯಕರು ಬಹುಮತ ಸಾಬೀತುಪಡಿಸುವ ದಿನದವರೆಗೂ ಶಾಸಕರುಗಳೊಂದಿಗೆ ಹೊರ ರಾಜ್ಯದಲ್ಲಿ ವಾಸ್ತವ್ಯ ಹೂಡಲು ಚಿಂತನೆ ನಡೆಸಿದ್ದಾರೆ.

ಕೇರಳದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದು, ಜೆಡಿಎಸ್ ಪಾಲುದಾರ ಪಕ್ಷವಾಗಿರುವ ಕಾರಣ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರುಗಳನ್ನು ಕೊಚ್ಚಿಗೆ ಕರೆದುಕೊಂಡು ಹೋಗಲು ಉಭಯ ಪಕ್ಷಗಳ ನಾಯಕರು ಮುಂದಾಗಿದ್ದಾರೆ. ತಂದೆ ಕುಮಾರಸ್ವಾಮಿಯವರ ಸೂಚನೆಯಂತೆ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಶಾಸಕರ ನೇತೃತ್ವ ವಹಿಸಲಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...