alex Certify
ಕನ್ನಡ ದುನಿಯಾ       Mobile App
       

Kannada Duniya

ದರ್ಶನ್ ‘ಕುರುಕ್ಷೇತ್ರ’ ನಿರೀಕ್ಷೆಯಲ್ಲಿದ್ದವರಿಗೆ ಖುಷಿ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಅದ್ಧೂರಿ ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಕುರುಕ್ಷೇತ್ರ’ ಚಿತ್ರ ಆರಂಭದಿಂದಲೂ ಕುತೂಹಲ ಮೂಡಿಸಿದೆ.

ಬಹು ತಾರಾಗಣದಲ್ಲಿ ನಿರ್ಮಾಣವಾಗಿರುವ ‘ಕುರುಕ್ಷೇತ್ರ’ ದರ್ಶನ್ ಅಭಿನಯದ 50 ನೇ ಚಿತ್ರವಾಗಿದೆ. ಹೈದರಾಬಾದ್ ರಾಮೋಜಿ ಫಿಲಂ ಸಿಟಿಯಲ್ಲಿ ವಿಶೇಷವಾದ ಸೆಟ್ ಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಮುನಿರತ್ನ ನಿರ್ಮಾಣ ಮಾಡಿರುವ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ.

ಘಟಾನುಘಟಿ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದು, ಚಿತ್ರವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು, ಸಿನಿರಸಿಕರು ಕಾತರರಾಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಈ ವೇಳೆಗಾಗಲೇ ‘ಕುರುಕ್ಷೇತ್ರ’ ತೆರೆಗೆ ಬರಬೇಕಿತ್ತು.

ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿರುವುದರಿಂದ ಚಿತ್ರ ತೆರೆಗೆ ಬರಲು ವಿಳಂಬವಾಗ್ತಿದೆ. ಲಹರಿ ಕಂಪನಿ ದೊಡ್ಡ ಮೊತ್ತಕ್ಕೆ ಚಿತ್ರ ಆಡಿಯೋ ಹಕ್ಕುಗಳನ್ನು ಖರೀದಿಸಿದ್ದು, ಏಪ್ರಿಲ್ ತಿಂಗಳಾಂತ್ಯಕ್ಕೆ ಆಡಿಯೋ ಬಿಡುಗಡೆಗೆ ಪ್ಲಾನ್ ಮಾಡಲಾಗಿದೆ.

ಅದಾಗಿ ಕೆಲವೇ ದಿನಗಳಲ್ಲಿ ‘ಕುರುಕ್ಷೇತ್ರ’ ಬಿಡುಗಡೆ ಮಾಡಲಾಗುವುದು. ಇದಕ್ಕಾಗಿ ತಂತ್ರಜ್ಞರು ನಿರಂತರವಾಗಿ ಕೆಲಸದಲ್ಲಿ ನಿರತರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...