alex Certify
ಕನ್ನಡ ದುನಿಯಾ       Mobile App
       

Kannada Duniya

ಶೂಟಿಂಗ್ ಹಂತದಲ್ಲೇ ಸೌಂಡ್ ಮಾಡ್ತಿದೆ ‘ಕುರುಕ್ಷೇತ್ರ’

ಮುನಿರತ್ನ ನಿರ್ಮಾಣ, ನಾಗಣ್ಣ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುದೊಡ್ಡ ತಾರಾಗಣವಿರುವ ‘ಕುರುಕ್ಷೇತ್ರ’ ಸ್ಯಾಂಡಲ್ ವುಡ್ ನಲ್ಲಿ ಸಖತ್ ಸೌಂಡ್ ಮಾಡ್ತಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್, ರೆಬಲ್ ಸ್ಟಾರ್ ಅಂಬರೀಶ್, ಕ್ರೇಜಿಸ್ಟಾರ್ ರವಿಚಂದ್ರನ್, ಅರ್ಜುನ್ ಸರ್ಜಾ, ರವಿಶಂಕರ್, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವಾರು ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಹೈದರಾಬಾದ್ ರಾಮೋಜಿ ಫಿಲಂ ಸಿಟಿಯಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ. ಬಿಗ್ ಬಜೆಟ್ ನಲ್ಲಿ ನಿರ್ಮಾಣವಾಗ್ತಿರುವ ‘ಕುರುಕ್ಷೇತ್ರ’ದಲ್ಲಿ ದರ್ಶನ್ ದುರ್ಯೋಧನನ ಪಾತ್ರದಲ್ಲಿ ಮಿಂಚಿದ್ದಾರೆ.

ಅವರ ಪಾತ್ರದ ಫೋಟೋಗಳು ಈಗಾಗಲೇ ಅಭಿಮಾನಿಗಳನ್ನು ಸೆಳೆದಿವೆ. ಇದೇ ವೇಳೆ, ದರ್ಶನ್ ‘ಕುರುಕ್ಷೇತ್ರ’ ಚಿತ್ರದ ಕಟೌಟ್ ಗಮನ ಸೆಳೆದಿದೆ.

ಸಿನಿಮಾ ಇನ್ನೂ ಚಿತ್ರೀಕರಣ ಹಂತದಲ್ಲಿರುವಾಗಲೇ. ಮೈಸೂರಿನಲ್ಲಿ ‘ಕುರುಕ್ಷೇತ್ರ’ ಚಿತ್ರದ ಕಟೌಟ್ ರಾರಾಜಿಸಿದೆ. ಚಾಮುಂಡೇಶ್ವರಿ ಯುವಕರ ಬಳಗದಿಂದ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ‘ಕುರುಕ್ಷೇತ್ರ’ದ ದರ್ಶನ್ ಅವರ ಬೃಹತ್ ಕಟೌಟ್ ಹಾಕಿ ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...