alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ಣ – ದುರ್ಯೋಧನರೊಂದಿಗೆ ಭಾನುಮತಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಕುರುಕ್ಷೇತ್ರ’ ಚಿತ್ರೀಕರಣ ಹೈದರಾಬಾದ್ ರಾಮೋಜಿ ಫಿಲಂ ಸಿಟಿಯಲ್ಲಿ ನಡೆಯುತ್ತಿದೆ.

ಚಿತ್ರದಲ್ಲಿ ದರ್ಶನ್ ದುರ್ಯೋಧನನಾಗಿ, ಅರ್ಜುನ್ ಸರ್ಜಾ ಕರ್ಣನಾಗಿ ಅಭಿನಯಿಸಿದ್ದು, ದುರ್ಯೋಧನನ ಪತ್ನಿ ಭಾನುಮತಿಯಾಗಿ ಮೇಘನಾ ರಾಜ್ ಕಾಣಿಸಿಕೊಳ್ಳುತ್ತಿದ್ದಾರೆ.

ಈ ಪಾತ್ರಕ್ಕೆ ಹಲವು ನಟಿಯರ ಹೆಸರು ಕೇಳಿ ಬಂದಿದ್ದವಾದರೂ, ಅಂತಿಮವಾಗಿ ಮೇಘನಾ ರಾಜ್ ಅವರು ಭಾನುಮತಿ ಪಾತ್ರಕ್ಕೆ ಆಯ್ಕೆಯಾಗಿದ್ದಾರೆ.

ದರ್ಶನ್ ಅವರೊಂದಿಗೆ ಮೇಘನಾ ರಾಜ್ ಮೊದಲ ಬಾರಿಗೆ ಅಭಿನಯಿಸುತ್ತಿದ್ದಾರೆ. ಅರ್ಜುನ್ ಸರ್ಜಾ ಮತ್ತು ದರ್ಶನ್ ಅವರೊಂದಿಗೆ ಚಿತ್ರೀಕರಣ ಸ್ಥಳದಲ್ಲಿ ತೆಗೆದ ಫೋಟೋವನ್ನು ಮೇಘನಾ ರಾಜ್ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಮುನಿರತ್ನ ನಿರ್ಮಾಣದಲ್ಲಿ, ನಾಗಣ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಕುರುಕ್ಷೇತ್ರ’ ಸ್ಯಾಂಡಲ್ ವುಡ್ ಮಾತ್ರವಲ್ಲ, ಸೌತ್ ಸಿನಿ ದುನಿಯಾದ ಗಮನ ಸೆಳೆದಿದೆ.

ಹೈಬಜೆಟ್ ನಲ್ಲಿ ಚಿತ್ರ ನಿರ್ಮಾಣವಾಗುತ್ತಿದ್ದು, ಘಟಾನುಘಟಿ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ರೆಬಲ್ ಸ್ಟಾರ್ ಅಂಬರೀಶ್, ಕ್ರೇಜಿಸ್ಟಾರ್ ರವಿಚಂದ್ರನ್, ನಿಖಿಲ್ ಕುಮಾರ್, ಶಶಿಕುಮಾರ್ ಮೊದಲಾದವರು ಅಭಿನಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...