alex Certify
ಕನ್ನಡ ದುನಿಯಾ       Mobile App
       

Kannada Duniya

‘ಮುನ್ನಾಭಾಯ್’ ಸರಣಿಯ ನಟ ಹೇಮು ಅಧಿಕಾರಿ ಇನ್ನಿಲ್ಲ

ಮರಾಠಿ ಚಿತ್ರರಂಗದ ಹಿರಿಯ ನಟ ಹಾಗೂ ಸಂಜಯ್ ದತ್ ಅಭಿನಯದ, ರಾಜಕುಮಾರ್ ಹಿರಾನಿ ನಿರ್ದೇಶನದ ‘ಲಗೇ ರಹೋ ಮುನ್ನಾಭಾಯ್’ ಚಿತ್ರದಲ್ಲಿ ಅಭಿನಯಿಸಿದ್ದ ಹೇಮು ಅಧಿಕಾರಿ ಅನಾರೋಗ್ಯದ ಕಾರಣಕ್ಕೆ ಸಾವನ್ನಪ್ಪಿದ್ದಾರೆ.

81 ವರ್ಷದ ಹೇಮು ಅಧಿಕಾರಿ, ಹಲವು ದಿನಗಳಿಂದ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದ ಕಾರಣ ಸಾವನ್ನಪ್ಪಿದ್ದಾರೆ. ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದು, ಸೋಮವಾರ ಸಂಜೆ ಇವರ ಅಂತ್ಯಕ್ರಿಯೆ ಮುಂಬೈನಲ್ಲಿ ನೆರವೇರಿದೆ.

ಮರಾಠಿ ರಂಗಭೂಮಿಯಲ್ಲಿ ಹಾಗೂ ಬಾಲಿವುಡ್ ಚಿತ್ರರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಹೇಮು ಅಧಿಕಾರಿ, ‘ಲಗೇ ರಹೋ ಮುನ್ನಾಭಾಯ್’, ‘ಕಥಾ’ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದರು. ಹೇಮು  ಅಧಿಕಾರಿಯವರ ನಿಧಾನಕ್ಕೆ ನಟಿ ಸೋನಾಲಿ ಕುಲಕರ್ಣಿ ಶ್ರದ್ದಾಂಜಲಿ ಸಲ್ಲಿಸಿದ್ದು, ಓರ್ವ ಹಿರಿಯ ನಟನನ್ನು ಕಳೆದುಕೊಂಡು ಚಿತ್ರರಂಗ ಬಡವಾಗಿದೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...