alex Certify
ಕನ್ನಡ ದುನಿಯಾ       Mobile App
       

Kannada Duniya

ಲೈಂಗಿಕ ದೌರ್ಜನ್ಯದ ಬಗ್ಗೆ ನಟಿಯ ಮೊದಲ ಪ್ರತಿಕ್ರಿಯೆ

life-has-knocked-me-down-but-will-always-get-up-kerala-actress-after-molestation

ಚಲಿಸುತ್ತಿರುವ ಕಾರಿನಲ್ಲೇ ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವ ನಟಿ ಘಟನೆ ಬಗ್ಗೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬದುಕಿನಲ್ಲಿ ಮುಂದಡಿ ಇಡದಂತೆ ಈ ಕಹಿ ಘಟನೆ ತಮ್ಮನ್ನು ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಕಠಿಣ ಸಂದರ್ಭದಲ್ಲಿ ತಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಅವರು ಧನ್ಯವಾದ ಹೇಳಿದ್ದಾರೆ.

”ಬದುಕು ಹಲವು ಬಾರಿ ನನ್ನನ್ನು ಕೆಳಕ್ಕೆ ಬೀಳಿಸಿದೆ. ಬೇಡವಾದ ಅನುಭವಗಳ ದರ್ಶನ ಮಾಡಿಸಿದೆ. ವೈಫಲ್ಯ ಹಾಗೂ ದುಃಖವನ್ನು ನಾನು ಬಹಳಷ್ಟು ಬಾರಿ ಅನುಭವಿಸಿದ್ದೇನೆ. ಆದ್ರೆ ಎಲ್ಲವನ್ನೂ ಮೆಟ್ಟಿ ನಿಂತು ಮುನ್ನುಗ್ಗುತ್ತೇನೆ” ಅಂತಾ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಪೋಸ್ಟ್ ಅನ್ನು ಮಲಯಾಳಂ ನಟ ಪೃಥ್ವಿರಾಜ್ ತಮ್ಮ ಫೇಸ್ ಬುಕ್ ನಲ್ಲಿ ಶೇರ್ ಮಾಡಿದ್ದಾರೆ. ಫೆಬ್ರವರಿ 17ರಂದು ಬಹುಭಾಷಾ ನಟಿಯನ್ನು ಅಪಹರಿಸಿದ್ದ ದುಷ್ಕರ್ಮಿಗಳು ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹಲ್ಲೆ ಮಾಡಿದ್ದರು. ಪ್ರಮುಖ ಆರೋಪಿ ಪಲ್ಸರ್ ಸುನಿ ಸೇರಿದಂತೆ 6 ಮಂದಿ ಕಾಮುಕರನ್ನು ಪೊಲೀಸರು ಈಗಾಗ್ಲೇ ಬಂಧಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...