alex Certify
ಕನ್ನಡ ದುನಿಯಾ       Mobile App
       

Kannada Duniya

ಗುಂಡು ಹಾರಿಸಿ ಗಾಯಕಿ ಹರ್ಷಿತಾ ಹತ್ಯೆ

ಚಂಡೀಗಡ: ಹರಿಯಾಣದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಗುಂಡಿನ ದಾಳಿ ನಡೆಸಿ ಗಾಯಕಿ ಹರ್ಷಿತಾ ದಹಿಯಾ ಅವರನ್ನು ಹತ್ಯೆ ಮಾಡಿದ್ದಾರೆ.

ಪಾಣಿಪತ್ ಸಮೀಪದ ಇಸ್ರಾನಾ ಚಾಮ್ರಾಡಾ ಗ್ರಾಮದಲ್ಲಿ ಆಯೋಜಿಸಿದ್ದ ಸಂಗೀತ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಿದ ಬಳಿಕ ಅವರು ಕಾರ್ ನಲ್ಲಿ ವಾಪಸ್ ಆಗುವಾಗ, ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಅಪರಿಚಿತರು ದಾಳಿ ಮಾಡಿ 4 ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದು, ಹರ್ಷಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಹರ್ಷಿತಾ ಮೃತದೇಹವನ್ನು ಪಾಣಿಪತ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ. ಹರ್ಷಿತಾ ಜನಪದ ಗಾಯನದಲ್ಲಿ ಖ್ಯಾತರಾಗಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...