alex Certify
ಕನ್ನಡ ದುನಿಯಾ       Mobile App
       

Kannada Duniya

ರಾಖಿ ಸಾವಂತ್ ಗೆ ಮತ್ತೆ ಅರೆಸ್ಟ್ ವಾರೆಂಟ್

raki-sawt

ಚಂಡೀಗಡ: ಮಹರ್ಷಿ ವಾಲ್ಮೀಕಿ ಕುರಿತಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ರಾಖಿ ಸಾವಂತ್ ಗೆ ಲೂಧಿಯಾನ ಕೋರ್ಟ್ ಮತ್ತೊಮ್ಮೆ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.

ಆಗಸ್ಟ್ 7 ರಂದು ಪ್ರಕರಣದ ವಿಚಾರಣೆಗೆ ಹಾಜರಾಗಬೇಕಿದ್ದ ರಾಖಿ ಸಾವಂತ್ ವಿಚಾರಣೆಗೆ ಗೈರು ಹಾಜರಾಗಿದ್ದಲ್ಲದೇ, ತಮ್ಮ ವಕೀಲರ ಮೂಲಕ ಅಮೆರಿಕಕ್ಕೆ ತೆರಳುವುದಾಗಿ ಹೇಳಿದ್ದಾರೆ.

ಅಲ್ಲದೇ, ಜಾಮೀನು ನೀಡುವಂತೆ ಆಕೆಯ ಪರ ವಕೀಲರು ಕೆಳ ಹಂತದ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಲ್ಪಟ್ಟಿದ್ದು, ಮಂಗಳವಾರ ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೆ ರಾಖಿ ಸಾವಂತ್ ಗೆ ಜಾಮೀನು ಮಂಜೂರು ಮಾಡಿದ್ದು, ಅದನ್ನು ವಿಸ್ತರಿಸಲು ಕೋರ್ಟ್ ನಿರಾಕರಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...