alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಮಾಧುರಿ ದೀಕ್ಷಿತ್ ಸ್ಪರ್ಧೆ…?

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಲು ಸಿದ್ಧತೆ ನಡೆಸುತ್ತಿರುವ ಭಾರತೀಯ ಜನತಾ ಪಾರ್ಟಿ ಕೆಲ ಕ್ಷೇತ್ರಗಳಲ್ಲಿ ಸೆಲೆಬ್ರಿಟಿಗಳನ್ನು ಕಣಕ್ಕಿಳಿಸಲು ಮುಂದಾಗಿದೆ.

ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿರುವ ಸೆಲೆಬ್ರಿಟಿಗಳನ್ನು ಬಿಜೆಪಿ ನಾಯಕರು ಗುರುತಿಸಿದ್ದು, ಒಂದು ಕಾಲದಲ್ಲಿ ಬಾಲಿವುಡ್ ಚಿತ್ರರಂಗವನ್ನು ಆಳಿದ್ದ ಮಾಧುರಿ ದೀಕ್ಷಿತ್ ಅವರನ್ನು ಪುಣೆ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಮಣೆ ಹಾಕಲು ಮುಂದಾಗಿರುವ ಬಿಜೆಪಿ ನಾಯಕರು ಪುಣೆ ಲೋಕಸಭಾ ಕ್ಷೇತ್ರಕ್ಕೆ ಮಾಧುರಿ ದೀಕ್ಷಿತ್ ಅವರನ್ನು ಆಯ್ಕೆ ಮಾಡಿದ್ದು, ಪೂರ್ವಭಾವಿಯಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಮಾಧುರಿ ದೀಕ್ಷಿತ್ ಅವರನ್ನು ಭೇಟಿ ಮಾಡಿ ಒಪ್ಪಿಗೆ ಪಡೆದಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...