alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಿವುಡ್ ಹಾಟ್ ಗರ್ಲ್ ಸೆಲ್ಫಿಗೆ ಒಬಾಮ ಸ್ಮೈಲ್

mallik obama

ವಿಶ್ವದ ದೊಡ್ಡಣ್ಣ ಅಮೆರಿಕ ಅಧ್ಯಕ್ಷರನ್ನು ಭೇಟಿ ಮಾಡುವುದು ಹುಡುಗಾಟಿಕೆ ಮಾತಲ್ಲ, ಅಂತಹುದರಲ್ಲಿ ಅವರನ್ನು ಭೇಟಿ ಮಾಡಿದ್ದಲ್ಲದೇ ಸೆಲ್ಫಿ ತೆಗೆದುಕೊಳ್ಳುವುದೆಂದರೆ ಸುಮ್ಮನೆ ಮಾತ. ಬಾಲಿವುಡ್ ಬೆಡಗಿಯೊಬ್ಬರು ಒಬಾಮಾ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ.

ಬಾಲಿವುಡ್ ಹಾಟ್ ಗರ್ಲ್ ಮಲ್ಲಿಕಾ ಶೆರಾವತ್ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮರನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ಕೆಲ ಕ್ಷಣಗಳನ್ನು ಕಳೆದಿದ್ದು, ಈ ಸಂದರ್ಭದಲ್ಲಿ ಒಬಾಮ ಜೊತೆಗೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಒಬಾಮಾ ಕೂಡ ಮಲ್ಲಿಕಾ ಶೆರಾವತ್ ಸೆಲ್ಫಿಗೆ ನಗುತ್ತಲೇ ಪೋಸ್ ನೀಡಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿರುವ ಮಲ್ಲಿಕಾ ಶೆರಾವತ್, ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡುವ ಅದೃಷ್ಟ ತಮಗೆ ಸಿಕ್ಕಿದ್ದಾಗಿ ಹೇಳಿಕೊಂಡಿದ್ದಾರೆ.

ಒಬಾಮಾ ಅವರನ್ನು ಭೇಟಿ ಮಾಡುವ ಅದೃಷ್ಟ ಒದಗಿ ಬಂದಿತ್ತು. ಈ ಸಂತಸವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಇದು ಹೆಮ್ಮೆಯ ಕ್ಷಣ ಎಂದು ಮಲ್ಲಿಕಾ ಶೆರಾವತ್ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ. ಬಾಲಿವುಡ್, ಸ್ಯಾಂಡಲ್ ವುಡ್ ಸೇರಿದಂತೆ ಹಲವು ಭಾಷೆಗಳ ಸಿನಿಮಾದಲ್ಲಿ ಮಲ್ಲಿಕಾ ಶೆರಾವತ್ ನಟಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...