alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಗಿದೆ ‘ಟಗರು’ ಮಾನ್ವಿತಾರ ಈ ವಿಡಿಯೋ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ನಡೆದ ಸಹ್ಯಾದ್ರಿ ಉತ್ಸವದಲ್ಲಿ ನಟಿ ಮಾನ್ವಿತಾ ಡಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕುವೆಂಪು ವಿಶ್ವವಿದ್ಯಾಲಯ ವತಿಯಿಂದ ಅಂತರಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಸಹ್ಯಾದ್ರಿ ಉತ್ಸವ ಆಯೋಜಿಸಿದ್ದು ಈ ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸಿದ್ದ ಮಾನ್ವಿತಾ ‘ಟಗರು’ ಚಿತ್ರದ ಹಾಡಿಗೆ ಭರ್ಜರಿ ಡಾನ್ಸ್ ಮಾಡಿದ್ದಾರೆ.

‘ಟಗರು ಬಂತು ಟಗರು’ ಹಾಡಿಗೆ ಅವರು ವೇದಿಕೆ ಮೇಲೆ ಡಾನ್ಸ್ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೇದಿಕೆಯಲ್ಲಿ ಮಾನ್ವಿತಾ ಡಾನ್ಸ್ ಮಾಡಿರುವ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಪರ – ವಿರೋಧ ಚರ್ಚೆಗೆ ಕಾರಣವಾಗಿದೆ.

ವಿಶ್ವವಿದ್ಯಾನಿಲಯ ವೇದಿಕೆಯಲ್ಲಿ ಇಂತಹ ಡಾನ್ಸ್ ಮಾಡಿಸಿದ್ದು ಸರಿಯಲ್ಲ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಮಾನ್ವಿತಾ ಡಾನ್ಸ್ ವಿಚಾರಕ್ಕೆ ವಿರೋಧ ವ್ಯಕ್ತವಾಗಿರುವಂತೆಯೇ ಪರವಾದ ಅಭಿಪ್ರಾಯಗಳು ಕೇಳಿ ಬಂದಿವೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಗೆ ಕಲಾವಿದರನ್ನು ಕರೆಯುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಲಾಗಿದೆ.

ವಿಶ್ವವಿದ್ಯಾಲಯಗಳಲ್ಲಿ ಪಾಠ, ಪ್ರಚನ, ವಿಚಾರಸಂಕಿರಣ, ಕಾರ್ಯಾಗಾರಗಳು ನಡೆಯುವ ಸಂದರ್ಭದಲ್ಲಿ ಚಿಂತಕರು ಬಂದು ಮಾರ್ಗದರ್ಶನ ನೀಡುತ್ತಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಚಿಂತಕರನ್ನು ಕರೆಸುವ ಬದಲು ಕಲಾವಿದರನ್ನು ಕರೆಸಿದ್ದು ತಪ್ಪೇನಲ್ಲ ಎಂದು ಹೇಳಲಾಗಿದೆ.

Manvitha Kamath 🤩🤩🤩 masth Dance 🔥 🔥

Posted by Troll Who Trolls Dr.Shivanna SRK on Friday, October 4, 2019

Subscribe Newsletter

Get latest updates on your inbox...

Opinion Poll

  • ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉಳಿದ ಅವಧಿಯನ್ನು ಪೂರೈಸಲಿದೆಯಾ...?

    View Results

    Loading ... Loading ...