alex Certify
ಕನ್ನಡ ದುನಿಯಾ       Mobile App
       

Kannada Duniya

ಸೆ. 1 ರಿಂದ ಗೋಲ್ಡನ್ ಸ್ಟಾರ್ ‘ಮುಗುಳು ನಗೆ’

ganesh-nage-s

ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ‘ಮುಗುಳು ನಗೆ’ ಸೆಪ್ಟಂಬರ್ 1 ರಂದು ಭರ್ಜರಿಯಾಗಿ ತೆರೆಗೆ ಬರಲಿದೆ.

ವಿ. ಹರಿಕೃಷ್ಣ ಸಂಗೀತ ನೀಡಿದ್ದು, ಈಗಾಗಲೇ ಹಾಡುಗಳು ಕಮಾಲ್ ಮಾಡುತ್ತಿವೆ. ‘ಮುಂಗಾರು ಮಳೆ’, ‘ಗಾಳಿಪಟ’ ಬಳಿಕ ಗಣೇಶ್ ಮತ್ತು ಯೋಗರಾಜ ಭಟ್ ‘ಮುಗುಳು ನಗೆ’ ಬೀರಿದ್ದಾರೆ.

ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿರುವ ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರಿಸುತ್ತಿದ್ದಾರೆ.

ಈ ಮೊದಲು ಆಗಸ್ಟ್ ನಲ್ಲೇ ‘ಮುಗುಳು ನಗೆ’ ರಿಲೀಸ್ ಆಗಲಿದೆ ಎನ್ನಲಾಗಿತ್ತಾದರೂ, ಸೆಪ್ಟಂಬರ್ 1 ರಂದು ತೆರೆಗೆ ಬರಲು ಸಿದ್ಧವಾಗಿದೆ.

ಅಮೂಲ್ಯ, ಆಶಿಕಾ ರಂಗನಾಥ್, ನಿಖಿತಾ ನಾರಾಯಣ್, ಅಪೂರ್ವ ಆರೋರಾ ಮೊದಲಾದವರು ಅಭಿನಯಿಸಿದ್ದಾರೆ. ಸೈಯದ್ ಸಲಾಂ ನಿರ್ಮಾಣ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...