alex Certify
ಕನ್ನಡ ದುನಿಯಾ       Mobile App
       

Kannada Duniya

ಅಭಿಮಾನಿಗಳೊಂದಿಗೆ ನಿಖಿಲ್ ಹುಟ್ಟುಹಬ್ಬ ಆಚರಣೆ

ಬೆಂಗಳೂರು: ‘ಜಾಗ್ವಾರ್’ ಖ್ಯಾತಿಯ ನಟ ನಿಖಿಲ್ ಕುಮಾರ್ 28 ನೇ ವರ್ಷಕ್ಕೆ ಕಾಲಿಟ್ಟಿದ್ದು, ಇಂದು ಅಭಿಮಾನಿಗಳೊಂದಿಗೆ ಸಂಭ್ರಮದಿಂದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಬೆಂಗಳೂರು ಮಾತ್ರವಲ್ಲದೇ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಅಭಿಮಾನಿಗಳು ನಿಖಿಲ್ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿದ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿ ಘೋಷಣೆ ಕೂಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ನಿಖಿಲ್ ಕುಮಾರ್, ದರ್ಶನ್ ಅವರ 50 ನೇ ಚಿತ್ರ ‘ಕುರುಕ್ಷೇತ್ರ’ ತಮ್ಮ 2 ನೇ ಚಿತ್ರವಾಗಿದ್ದು, ಮಾರ್ಚ್ ನಲ್ಲಿ ತೆರೆ ಕಾಣಲಿದೆ. 3 ನೇ ಚಿತ್ರ ‘ಸೀತಾರಾಮ ಕಲ್ಯಾಣ’ ಚಿತ್ರೀಕರಣ ನಡೆದಿದೆ ಎಂದು ತಿಳಿಸಿದ್ದಾರೆ.

ನನಗೆ ರಾಜಕೀಯಕ್ಕೆ ಬರುವ ಉದ್ದೇಶವಿಲ್ಲ. ಆದರೆ, ತಂದೆಯ ಪರವಾಗಿ ಪ್ರಚಾರ ನಡೆಸುತ್ತೇನೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...