alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲಿದೆ ಸುದೀಪ್ ‘ಪೈಲ್ವಾನ್’ ಕುರಿತ ಅಚ್ಚರಿಯ ಸುದ್ದಿ

ಸ್ಯಾಂಡಲ್ ವುಡ್ ನಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಡಿಸೆಂಬರ್ ನಲ್ಲಿ ತೆರೆಗೆ ಬರಲಿದೆ. ಮಾತ್ರವಲ್ಲ, ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಕೂಡ ಅಭಿನಯಿಸಿದ್ದಾರೆ.

ಇಂತಹುದೊಂದು ಸುದ್ದಿ ಅಭಿಮಾನಿಗಳಲ್ಲಿ ಮಾತ್ರವಲ್ಲ, ಚಿತ್ರರಂಗದಲ್ಲೇ ಕುತೂಹಲ ಮೂಡಿಸಿದೆ. ‘ಪೈಲ್ವಾನ್’ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಚಿತ್ರದ ಪ್ರಾಥಮಿಕ ಹಂತದ ಕೆಲಸಗಳು ನಡೆಯುತ್ತಿವೆ. ಹೀಗಿರುವಾಗಲೇ ಸಿನಿಮಾ ರಿಲೀಸ್ ಆಗಲಿದೆ ಎಂದು ‘ಬುಕ್ ಮೈ ಶೋ’ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ.

ಪ್ರೀ ಪ್ರೊಡಕ್ಷನ್ ಹಂತದಲ್ಲಿರುವ ‘ಪೈಲ್ವಾನ್’ ಚಿತ್ರ ಡಿಸೆಂಬರ್ ನಲ್ಲಿ ಬಿಡುಗಡೆಯಾಗಲಿದೆ. ಶಿವರಾಜ್ ಕುಮಾರ್ ನಟಿಸಿದ್ದಾರೆ ಎಂದು ಹಾಕುವ ಮೂಲಕ ಅಚ್ಚರಿ ಮೂಡಿಸಿದೆ.

‘ಹೆಬ್ಬುಲಿ’ ಬಳಿಕ ಸುದೀಪ್ ಮತ್ತು ನಿರ್ದೇಶಕ ಕೃಷ್ಣ ಕಾಂಬಿನೇಷನ್ ನಲ್ಲಿ ‘ಪೈಲ್ವಾನ್’ ಮೂಡಿ ಬರುತ್ತಿದ್ದು, ಸಖತ್ ಹವಾ ಸೃಷ್ಠಿಸಿದೆ. ಇನ್ನೂ ಪ್ರಾಥಮಿಕ ಹಂತದಲ್ಲಿರುವ ಈ ಚಿತ್ರ ಬಿಡುಗಡೆಯಾಗಲಿದೆ ಎಂದು ‘ಬುಕ್ ಮೈ ಶೋ’ನಲ್ಲಿ ಯಡವಟ್ಟಾಗಿದ್ದು, ಇದು ಭಾರೀ ಚರ್ಚೆಗೆ ಒಳಗಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...