alex Certify
ಕನ್ನಡ ದುನಿಯಾ       Mobile App
       

Kannada Duniya

ಡಾ. ರಾಜ್ ಸಮಾಧಿ ಪಕ್ಕದಲ್ಲಿ ಪಾರ್ವತಮ್ಮ ಅಂತ್ಯಸಂಸ್ಕಾರ

dr__rajkumar__samadhiಇಂದು ಬೆಳಗಿನ ಜಾವ ವಿಧಿವಶರಾದ ವರನಟ ಡಾ. ರಾಜ್ ಕುಮಾರ್ ಅವರ ಧರ್ಮ ಪತ್ನಿ, ಖ್ಯಾತ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅಂತ್ಯಸಂಸ್ಕಾರವನ್ನು ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್ ಸಮಾಧಿ ಪಕ್ಕದಲ್ಲಿ ನೆರವೇರಿಸಲು ತೀರ್ಮಾನಿಸಲಾಗಿದೆ.

ಇದಕ್ಕಾಗಿ ಈಗಾಗಲೇ ಸಿದ್ದತೆಗಳನ್ನು ಕೈಗೊಳ್ಳಲಾಗಿದ್ದು, ಸಂಜೆ 6 ಗಂಟೆ ವೇಳೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ. ಸದಾಶಿವನಗರದ ಪೂರ್ಣಪ್ರಜ್ಞ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನ ಮಾಡಬಹುದಾಗಿದೆ.

ಪಾರ್ವತಮ್ಮ ರಾಜ್ ಕುಮಾರ್ ಅವರ ನೇತ್ರಗಳನ್ನು ಅಂತಿಮ ಇಚ್ಚೆಯಂತೆ ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಗಿದೆ. ಕನ್ನಡ ಚಿತ್ರರಂಗಕ್ಕೆ ದೊಡ್ಡ ಶಕ್ತಿಯಾಗಿದ್ದ ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರಲ್ಲದೆ ಅಂತಿಮ ದರ್ಶನ ಪಡೆಯಲು ಸದಾಶಿವನಗರಕ್ಕೆ ಧಾವಿಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...