alex Certify
ಕನ್ನಡ ದುನಿಯಾ       Mobile App
       

Kannada Duniya

ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿದ ಖ್ಯಾತ ನಟ

pawan-kalyan_epsಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಪ್ರಸಾರ ಮಾಡುವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿದೆ. ರಾಷ್ಟ್ರಗೀತೆ ಪ್ರಸಾರವಾಗುವ ಸಂದರ್ಭದಲ್ಲಿ ವಿಕಲಚೇತನರನ್ನು ಹೊರತುಪಡಿಸಿ ಮಿಕ್ಕವರೆಲ್ಲರೂ ಎದ್ದು ನಿಂತು ಗೌರವ ಸೂಚಿಸಬೇಕೆಂದು ತನ್ನ ಆದೇಶದಲ್ಲಿ ತಿಳಿಸಿದೆ.

ಈಗಾಗಲೇ ದೇಶಾದ್ಯಂತ ಈ ನಿಯಮ ಜಾರಿಗೆ ಬಂದಿದ್ದು, ಆದೇಶವನ್ನು ಧಿಕ್ಕರಿಸಿದ ಹಲವು ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ. ಅಲ್ಲದೇ ರಾಷ್ಟ್ರಗೀತೆ ಪ್ರಸಾರವಾಗುತ್ತಿದ್ದ ಸಂದರ್ಭದಲ್ಲಿ ಎದ್ದು ನಿಲ್ಲದೆ ಅಗೌರವ ಸೂಚಿಸಿದ ಕಾರಣಕ್ಕೆ ಕೆಲವರ ಮೇಲೆ ಹಲ್ಲೆಯೂ ನಡೆದಿದೆ.

ಈ ಮಧ್ಯೆ ಕಳೆದ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರನ್ನು ಬೆಂಬಲಿಸಿದ್ದ ಖ್ಯಾತ ಟಾಲಿವುಡ್ ನಟ ಪವನ್ ಕಲ್ಯಾಣ್, ಕೆಲ ದಿನಗಳಿಂದ ಬಿಜೆಪಿ ಮುಂದೆ ಹಲವು ಪ್ರಶ್ನೆಗಳನ್ನಿಡುತ್ತಾ ಇರುಸುಮುರುಸು ತಂದಿದ್ದು, ಬಿಜೆಪಿ ಸಖ್ಯದಿಂದ ಈಗಾಗಲೇ ಒಂದು ಕಾಲು ಹೊರಗಿಟ್ಟಿರುವ ಜನಸೇನಾ ಸ್ಥಾಪಕರೂ ಆಗಿರುವ ಪವನ್ ಕಲ್ಯಾಣ್, ಇದೀಗ ಚಿತ್ರಮಂದಿರಗಳಲ್ಲಿ ಮಾತ್ರ ರಾಷ್ಟ್ರಗೀತೆ ಪ್ರಸಾರ ಮಾಡುವುದನ್ನು ಕಡ್ಡಾಯಗೊಳಿಸಿರುವ ಸುಪ್ರೀಂ ಕೋರ್ಟ್ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಕೇವಲ ಚಿತ್ರಮಂದಿರಗಳಿಗೆ ಮಾತ್ರ ಈ ನಿಯಮ ಅನ್ವಯಿಸುವುದೇಕೆ ಎಂದು ಪ್ರಶ್ನಿಸಿದ್ದಾರಲ್ಲದೇ ರಾಜಕೀಯ ಪಕ್ಷಗಳ ಸಭೆ, ಸಮಾರಂಭಗಳಿಗೆ ಇದನ್ನು ಕಡ್ಡಾಯ ಮಾಡಬಾರದೇಕೆ ಎಂದು ಕೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...