alex Certify
ಕನ್ನಡ ದುನಿಯಾ       Mobile App
       

Kannada Duniya

ನಟಿ ಪೂಜಾಗಾಂಧಿಗೆ ಜಾಮೀನು

ರಾಯಚೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ನಟಿ ಪೂಜಾಗಾಂಧಿ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನಿರಂತರವಾಗಿ ವಿಚಾರಣೆಗೆ ಗೈರು ಹಾಜರಾಗಿದ್ದ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು. ವಿಚಾರಣೆಗೆ ಹಾಜರಾಗದ ಅವರು ವಾರೆಂಟ್ ಜಾರಿಯಾದ ಬಳಿಕ ಕೋರ್ಟ್ ಗೆ ಹಾಜರಾಗಿದ್ದು, ಕೋರ್ಟ್ ಹಾಲ್ ನಲ್ಲಿ ಕಾಯುವಂತೆ ನ್ಯಾಯಾಧೀಶರು ಸೂಚನೆ ನೀಡಿದ್ದರು.

ಅದರಂತೆ ಸಂಜೆಯವರೆಗೂ ಕಾದ ಪೂಜಾಗಾಂಧಿ ಅವರಿಗೆ ಜಾಮೀನು ನೀಡಲಾಗಿದ್ದು, ಬಂಧನ ಭೀತಿಯಿಂದ ಪಾರಾಗಿದ್ದಾರೆ.

50,000 ರೂ. ಶ್ಯೂರಿಟಿ ಮತ್ತು ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿ ರಾಯಚೂರು ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮುಂದಿನ ವಿಚಾರಣೆಯನ್ನು ನವೆಂಬರ್ 3 ಕ್ಕೆ ಮುಂದೂಡಲಾಗಿದೆ.

2013 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪೂಜಾಗಾಂಧಿ ನೀತಿ ಸಂಹಿತೆ ಉಲ್ಲಂಘಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...