alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಾಹುಬಲಿ’ ಅಭಿಮಾನಿಗಳಿಗೊಂದು ಸಿಹಿ ಸುದ್ದಿ

ಬಾಹುಬಲಿಗಾಗಿ ಎರಡು ವರ್ಷಗಳನ್ನು ಮೀಸಲಿಟ್ಟಿದ್ದ ಪ್ರಭಾಸ್ ಈಗ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನ ಒಪ್ಪಿಕೊಳ್ತಿದ್ದಾರೆ. ಈಗಾಗ್ಲೇ ಸಾಹೋ ಚಿತ್ರದ ಚಿತ್ರೀಕರಣವನ್ನ ಬಹುತೇಕ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.

2019ರ ಜನವರಿಯಲ್ಲಿ ಸಾಹೋ ಬಿಡುಗಡೆಯಾಗುವ ಸಾಧ್ಯತೆ ಇದೆ. ಇದರ ನಡುವೆಯೇ ಪ್ರಭಾಸ್ ಮುಂದಿನ ಪ್ರಾಜೆಕ್ಟ್ ಸೆಟ್ಟೇರುತ್ತಿದೆ. ಸೆಪ್ಟೆಂಬರ್ 6ರಂದು ಪ್ರಭಾಸ್ ಮುಂದಿನ ಸಿನಿಮಾದ ಮುಹೂರ್ತ ಕಾರ್ಯ ನೆರವೇರಲಿದೆ.

ಜಿಲ್ ಖ್ಯಾತಿಯ ರಾಧಾಕೃಷ್ಣ ಕುಮಾರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದಾರೆ. ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ಎರಡು ವರ್ಷಗಳ ಹಿಂದೆಯೇ ಪ್ರಭಾಸ್ ಈ ಚಿತ್ರಕ್ಕೆ ಕಮಿಟ್ ಆಗಿದ್ದರಂತೆ. ಈ ಚಿತ್ರದಲ್ಲಿ ಪ್ರಭಾಸ್ ರೊಮ್ಯಾಂಟಿಕ್ ಹೀರೋ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಯೂರೋಪ್ ಬ್ಯಾಕ್ ಡ್ರಾಪ್ ನಲ್ಲಿ ನಡೆಯಲಿರುವ ಈ ಪೀರಿಯಾಡಿಕ್ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಬಾಹುಬಲಿ ಚಿತ್ರಕ್ಕಾಗಿ ತೂಕ ಹೆಚ್ಚಿಸಿಕೊಂಡಿದ್ದ ಪ್ರಭಾಸ್ ಇಲ್ಲಿ ಸ್ಲಿಮ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಮಿರ್ಚಿ ಚಿತ್ರಕ್ಕಾಗಿ 10 ಕೆಜಿ ತೂಕ ಇಳಿಸಿಕೊಂಡಿದ್ದ ಪ್ರಭಾಸ್, ಈ ಚಿತ್ರಕ್ಕಾಗಿ ಟ್ರಿಮ್ ಆಗುವ ಕಸರತ್ತು ಈಗಾಗ್ಲೇ ಆರಂಭಿಸಿದ್ದಾರಂತೆ. ವೇಮಾರೆಡ್ಡಿ ಮತ್ತು ವಂಶಿಕೃಷ್ಣ ರೆಡ್ಡಿ, ಉಪ್ಪಾಳಪಟ್ಟಿ ಪ್ರಮೋದ್ ಯುವಿ ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನ ನಿರ್ಮಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...