alex Certify
ಕನ್ನಡ ದುನಿಯಾ       Mobile App
       

Kannada Duniya

ಕಾವೇರಿ ಕಿಚ್ಚಿಗೆ ರದ್ದಾಯ್ತು ನಟಿ ಆರತಕ್ಷತೆ

pri aa

ಬೆಂಗಳೂರು: ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದ ದೌರ್ಜನ್ಯ ಹಾಗೂ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ವಿರೋಧಿಸಿ, ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾವೇರಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ.

ಇದೇ ಸಂದರ್ಭದಲ್ಲಿ ಬೆಂಗಳೂರಿನ ಅರಮನೆ   ಮೈದಾನದಲ್ಲಿ    ನಾಳೆ ನಡೆಯಬೇಕಿದ್ದ ಕಾರ್ಯಕ್ರಮವೊಂದು ರದ್ದಾಗಿದೆ. ಜೂನಿಯರ್ ಮಾಲಾಶ್ರೀ ಖ್ಯಾತಿಯ ನಟಿ ಹಾಗೂ ನಿರ್ದೇಶಕಿ ಪ್ರಿಯಾ ಹಾಸನ್ ಅವರ ಆರತಕ್ಷತೆ ಕಾರ್ಯಕ್ರಮ ನಾಳೆ   ನಡೆಯಬೇಕಿತ್ತು. ಆದರೆ, ಕಾವೇರಿ ಹೋರಾಟದಿಂದಾಗಿ ಬೆಂಗಳೂರಿನಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದ್ದರಿಂದ ಆರತಕ್ಷತೆ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ ಎಂದು ಹೇಳಲಾಗಿದೆ.

ಪ್ರಿಯಾ ಹಾಸನ್ ಅವರು ಸೆಪ್ಟಂಬರ್ 8 ರಂದು ಬೆಂಗಳೂರಿನ ಯಶವಂತಪುರದ ಶ್ರೀ ಗಾಯತ್ರಿ ದೇವಾಲಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ರಾಮು ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು,   ನಾಳೆ  ಸಂಜೆ ಆರತಕ್ಷತೆ ಕಾರ್ಯಕ್ರಮ ನಿಗಧಿಯಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...