alex Certify
ಕನ್ನಡ ದುನಿಯಾ       Mobile App
       

Kannada Duniya

ನಿಕ್ ಗೆ ಪ್ರಿಯಾಂಕಾಳನ್ನು ಪರಿಚಯಿಸಿದ್ಯಾರು ಗೊತ್ತಾ?

ನಟಿ ಪ್ರಿಯಾಂಕ ಚೋಪ್ರಾ ಮತ್ತು ನಿಕ್ ಜೋನಾಸ್ ಇಬ್ಬರ ಕುರಿತ ಗುಸುಗುಸು ಬಾಲಿವುಡ್ ನಲ್ಲಿ ಮಾತ್ರವಲ್ಲ ಹಾಲಿವುಡ್ ನಲ್ಲೂ ಕೇಳಿಬರುತ್ತಿದೆ. ಈ ಜೋಡಿ ಕುರಿತು ಡ್ವೇನ್ ಜಾನ್ಸನ್ ಮಹತ್ವದ ಮಾಹಿತಿಯೊಂದನ್ನು ಹೊರಗೆಡವಿದ್ದಾರೆ.

ಈ ಇಬ್ಬರ ಜೊತೆಯೂ ತೆರೆ ಮೇಲೆ ಕಾಣಿಸಿಕೊಂಡಿರುವ ಡ್ವೇನ್, ಪ್ರಿಯಾಂಕಾ ಮತ್ತು ನಿಕ್ ಜೋನಾಸ್ ರನ್ನು ಪರಸ್ಪರ ಪರಿಚಯಿಸಿದ್ದೇ ತಾನು ಎಂದು ಹೇಳಿಕೊಂಡಿದ್ದಾರೆ. ಈ ಇಬ್ಬರನ್ನು ಸೇರಿಸಿದ ಕೀರ್ತಿ ನನಗೆ ಸಲ್ಲುತ್ತದೆ ಎಂದಿದ್ದಾರೆ. ಇತ್ತೀಚಿಗೆ ಪ್ರಿಯಾಂಕ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಜೋನಾಸ್ ಜೊತೆಗಿದ್ದ ಫೋಟೊ ಅಪ್ ಲೋಡ್ ಮಾಡಿದ್ದರು. ಈ ಫೋಟೋ ವೈರಲ್ ಆಗುತ್ತಿದ್ದಂತೆಯೇ ಡ್ವೇನ್ ಈ ಹೇಳಿಕೆ ನೀಡಿದ್ದಾರೆ.

ಬಾಲಿವುಡ್ ನಟಿ ಪ್ರಿಯಾಂಕ, ಹಾಲಿವುಡ್ ಗಾಯಕ ನಿಕ್ ಜೋನಾಸ್ ಜೊತೆ ಡೇಟಿಂಗ್ ನಡೆಸುತ್ತಿದ್ದಾರೆ ಎಂಬುದು ಈಗ ಹಳೆ ಸುದ್ದಿ. ಈಗಾಗಲೇ ಈ ಜೋಡಿ ಒಬ್ಬರನ್ನೊಬ್ಬರು ಬಿಟ್ಟಿರದಂತೆ ಎಲ್ಲೆಡೆ ಸುತ್ತಾಟ ನಡೆಸಿದ್ದಾರೆ. 2017 ರಲ್ಲಿ ನ್ಯೂಯಾರ್ಕ್ ನಲ್ಲಿ ಈ ಇಬ್ಬರು ಪ್ರಥಮ ಬಾರಿಗೆ ಭೇಟಿಯಾಗಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...