alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಕಿ ಪಾವತಿಸದ ನೀರವ್ ಮೋದಿ ವಿರುದ್ಧ ಕೇಸ್ ಜಡಿದ ನಟಿ

ಪಂಜಾಬ್ ನ್ಯಾಶನಲ್ ಬ್ಯಾಂಕ್ ನಲ್ಲಿ ಸಾವಿರಾರು ಕೋಟಿ ಗೋಲ್ ಮಾಲ್ ಮಾಡಿ ವಿದೇಶಕ್ಕೆ ಪರಾರಿಯಾಗಿದ್ದಾರೆ ಎನ್ನಲಾದ ಉದ್ಯಮಿ ನೀರವ್ ಮೋದಿ ವಿರುದ್ಧ ನಟಿ ಪ್ರಿಯಾಂಕಾ ಚೋಪ್ರಾ ಕೂಡ ಕಾನೂನು ಹೋರಾಟಕ್ಕಿಳಿದಿದ್ದಾರೆ.

ನೀರವ್ ಮೋದಿ ಒಡೆತನದ ಜ್ಯುವೆಲರಿ ಬ್ರಾಂಡ್ ಒಂದರ ಜಾಹೀರಾತಿನಲ್ಲಿ ಪ್ರಿಯಾಂಕಾ ನಟಿಸಿದ್ದರು. ಆದ್ರೆ ಈವರೆಗೂ ಬಾಕಿ ಮೊತ್ತ ಪಾವತಿಸಿಲ್ಲವಂತೆ. ಒಪ್ಪಂದದ ಪ್ರಕಾರ ಹಣ ಪಾವತಿಸದ ನೀರವ್ ಮೋದಿ ವಿರುದ್ಧ ಪ್ರಿಯಾಂಕಾ ವಂಚನೆ ಕೇಸ್ ದಾಖಲಿಸಿದ್ದಾರೆ.

ಈ ಜಾಹೀರಾತಿನಲ್ಲಿ ಪ್ರಿಯಾಂಕಾ ಜೊತೆಗೆ ಸಿದ್ದಾರ್ಥ್ ಮಲ್ಹೋತ್ರಾ ನಟಿಸಿದ್ದರು. ಅವರಿಗೆ ಸಹ ಬಾಕಿ ಹಣ ಬರಬೇಕಾಗಿದ್ದು, ಕಾನೂನು ಹೋರಾಟ ನಡೆಸುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಮೂರು ಜಾಹೀರಾತು ಚಿತ್ರೀಕರಿಸಲು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದ್ರೆ ಒಂದು ಜಾಹೀರಾತನ್ನು ಮಾತ್ರ ಶೂಟ್ ಮಾಡಲಾಗಿದೆ.

ಪಂಜಾಬ್ ನ್ಯಾಶನಲ್ ಬ್ಯಾಂಕ್ ನಲ್ಲಿ ನಡೆದ 11,000 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನೀರವ್ ಮೋದಿ ಹೆಸರು ಕೇಳಿ ಬಂದಿದೆ. ಆತ 250 ಕೋಟಿ ರೂಪಾಯಿ ಗೋಲ್ಮಾಲ್ ನಡೆಸಿರೋದಾಗಿ ಕೇಸ್ ದಾಖಲಾಗಿದ್ದು, ಜಾರಿ ನಿರ್ದೇಶನಾಲಯ ಹುಡುಕಾಟ ಆರಂಭಿಸಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...