alex Certify
ಕನ್ನಡ ದುನಿಯಾ       Mobile App
       

Kannada Duniya

ನಟಿ ಪ್ರಿಯಾಂಕಾ ಹೆಸರಿನ ಮುಂದೆ ಇನ್ಮೇಲೆ ಡಾಕ್ಟರ್…!

ಹಾಲಿವುಡ್ ಚಿತ್ರರಂಗದಲ್ಲಿ ಮಿಂಚು ಹರಿಸುತ್ತಿರುವ ಖ್ಯಾತ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಇನ್ನು ಮುಂದೆ ತಮ್ಮ ಹೆಸರಿನ ಮುಂದೆ ಡಾಕ್ಟರ್ ಪದವನ್ನು ಅಲಂಕರಿಸಿಕೊಳ್ಳಲಿದ್ದಾರೆ. ಹಾಗೆಂದು ಅವರೇನೋ ಎಂಬಿಬಿಎಸ್ ಪದವಿ ಪಡೆದುಕೊಳ್ಳುತ್ತಿಲ್ಲ. ಬದಲಾಗಿ ತಮ್ಮ ಕಲಾ ಸೇವೆಗಾಗಿ ಈ ಗೌರವಕ್ಕೆ ಪಾತ್ರರಾಗುತ್ತಿದ್ದಾರೆ.

ಉತ್ತರ ಪ್ರದೇಶದ ಬರೇಲಿ ಇಂಟರ್ ನ್ಯಾಷನಲ್ ಯೂನಿವರ್ಸಿಟಿ ಪ್ರಿಯಾಂಕಾ ಚೋಪ್ರಾರಿಗೆ ಡಿಸೆಂಬರ್ 24 ರಂದು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸಚಿವ ಡಾ. ಹರ್ಷವರ್ಧನ್ ಉಪಸ್ಥಿತರಿರಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ. ಕೇಶವ್ ಕುಮಾರ್ ಅಗರ್ವಾಲ್, ಪ್ರಿಯಾಂಕಾ ಚೋಪ್ರಾರ ಕಲಾ ಸೇವೆಯನ್ನು ಪರಿಗಣಿಸಿ ಈ ಪದವಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. 5 ವರ್ಷಗಳ ಬಳಿಕ ತಮ್ಮ ತವರಿಗೆ ಭೇಟಿ ನೀಡುತ್ತಿರುವ ಪ್ರಿಯಾಂಕಾ ಚೋಪ್ರಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...